Thursday, March 28, 2024
spot_imgspot_img
spot_imgspot_img

ಇಂದು ಬ್ರಿಕ್ಸ್ ಶೃಂಗಸಭೆಯಲ್ಲಿ ಒಂದೇ ವೇದಿಕೆ ಹಂಚಿಕೊಳ್ಳಲಿರುವ ಮೋದಿ-ಜಿನ್ ಪಿಂಗ್

- Advertisement -G L Acharya panikkar
- Advertisement -

ನವದೆಹಲಿ: ಭಾರತ-ಚೀನಾ ಮಧ್ಯೆ ಲಡಾಖ್ ಗಡಿ ಸಂಘರ್ಷ ಇನ್ನೂ ಶಮನವಾಗಿಲ್ಲ. ಇದರ ನಡುವೆಯೇ 12ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಇಂದು ಪ್ರಧಾನಮಂತ್ರಿ ಮೋದಿ ಮತ್ತು ಚೀನಾ ಅಧ್ಯಕ್ಷ ಶೀ ಜಿನ್​​ಪಿಂಗ್ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಇಂದು ಸಂಜೆ 4.30ಕ್ಕೆ ಬ್ರಿಕ್ಸ್ ರಾಷ್ಟ್ರಗಳ 12ನೇ ಸಮ್ಮೇಳನ ನಡೆಯುತ್ತಿರುವ ಬಗ್ಗೆ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಈ ವರ್ಚುವಲ್ ಸಭೆಯಲ್ಲಿ ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಬಹುಪಕ್ಷೀಯ ವ್ಯವಸ್ಥೆ, ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು, ಭಯೋತ್ಪಾದನೆ ನಿಗ್ರಹ, ವ್ಯಾಪಾರ, ಆರೋಗ್ಯ ಮತ್ತು ಇಂಧನ ಸೇರಿದಂತೆ ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಲಿವೆ.

- Advertisement -

Related news

error: Content is protected !!