Thursday, March 28, 2024
spot_imgspot_img
spot_imgspot_img

ಕೋವಿಡ್​ ಸಂದರ್ಭದಲ್ಲಿ ಯೋಗ ಒಂದು ಭರವಸೆಯ ಕಿರಣವಾಗಿದೆ; ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ನವದೆಹಲಿ: ಇಂದು 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದರು.

ಇಂದು ಇಡೀ ಜಗತ್ತು ಕೊರೊನಾ ಸಾಂಕ್ರಾಮಿಕದ ವಿರುದ್ಧ ಹೋರಾಡುತ್ತಿರುವಾಗ, ಯೋಗ ಒಂದು ಭರವಸೆಯ ಕಿರಣವಾಗಿ ಮಾರ್ಪಟ್ಟಿದೆ. ಕಳೆದ ಎರಡು ವರ್ಷಗಳಿಂದ, ಯೋಗ ದಿನಾಚರಣೆಯಂದು ಭಾರತದಲ್ಲಿ ಅಥವಾ ವಿಶ್ವದಲ್ಲಿ ಎಲ್ಲೂ ಕೂಡ ಯಾವುದೇ ಸಾರ್ವಜನಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿಲ್ಲ. ಆದರೂ ಯೋಗದ ಉತ್ಸಾಹ ಕಡಿಮೆಯಾಗಿಲ್ಲ ಎಂದರು.

ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ‘ಯೋಗ ಫಾರ್ ವೆಲ್​ನೆಸ್’ ಥೀಮ್ ಜನರನ್ನು ಯೋಗ ಮಾಡಲು ಇನ್ನಷ್ಟು ಪ್ರೋತ್ಸಾಹಿಸಿದೆ. ಪ್ರತಿ ದೇಶ, ಪ್ರದೇಶ ಮತ್ತು ಜನರು ಆರೋಗ್ಯವಾಗಿರಲೆಂದು ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಹೇಳಿದ್ರು.

ಇಂದು ವೈದ್ಯಕೀಯ ವಿಜ್ಞಾನವು ಕೂಡ ಚಿಕಿತ್ಸೆಯ ಜೊತೆಗೆ ಗುಣಪಡಿಸುವ ಪ್ರಕ್ರಿಯೆ(ಹೀಲಿಂಗ್ ಪ್ರೋಸೆಸ್​​)ಗೆ ಒತ್ತು ನೀಡುತ್ತದೆ. ಗುಣಪಡಿಸುವ ಪ್ರಕ್ರಿಯೆಯಲ್ಲಿ ಯೋಗ ಸಹಾಯ ಮಾಡುತ್ತದೆ. ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ಯೋಗವನ್ನು ರಕ್ಷಾ ಕವಚವಾಗಿ ಬಳಸಿದ್ದಾರೆ.

ಆಸ್ಪತ್ರೆಗಳಲ್ಲಿ ವೈದ್ಯರು, ದಾದಿಯರು ರೋಗಿಗಳಿಗೆ ಅನುಲೋಮ ವಿಲೋಮ ಪ್ರಾಣಾಯಾಮದಂಥ ಉಸಿರಾಟದ ವ್ಯಾಯಾಮ ಕಲಿಸುತ್ತಾ ಯೋಗ ಮಾಡಿರುವ ಫೋಟೋಗಳನ್ನ ನಾವು ಸಾಕಷ್ಟು ಕಾಣಬಹುದು. ಈ ವ್ಯಾಯಾಮಗಳು ಉಸಿರಾಟದ ವ್ಯವಸ್ಥೆಯನ್ನ ಬಲಪಡಿಸುತ್ತವೆ ಎಂದು ಅಂತರರಾಷ್ಟ್ರೀಯ ತಜ್ಞರು ಹೇಳಿದ್ದಾರೆ ಎಂದು ಮೋದಿ ತಿಳಿಸಿದರು.

- Advertisement -

Related news

error: Content is protected !!