Tuesday, July 1, 2025
spot_imgspot_img
spot_imgspot_img

ಜನರಿಗೆ ಪೊಲೀಸರ ಬಗೆಗಿರುವ ನಕಾರಾತ್ಮಕ ಭಾವನೆಯನ್ನು ಬದಲಾಯಿಸಬೇಕು; ಪ್ರಧಾನಿ ಮೋದಿ

- Advertisement -
- Advertisement -

ನವದೆಹಲಿ: ಜನರಿಗೆ ಪೊಲೀಸ್‌ ಪಡೆಯ ಬಗ್ಗೆ ಇರುವ ನಕಾರಾತ್ಮಕ ಭಾವನೆ ಬದಲಿಸಲು ಶ್ರಮಿಸಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಐಪಿಎಸ್‌ ಪ್ರೊಬೇಷನ್‌ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್‌ ಪ್ರೊಬೇಷನ್‌ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಅವರು, “ಪೊಲೀಸರ ಬಗೆಗೆ ಜನರಲ್ಲಿರುವ ನಕಾರಾತ್ಮಕ ಗ್ರಹಿಕೆಯನ್ನು ಬದಲಾಯಿಸುವುದು ದೊಡ್ಡ ಸವಾಲು.

ಆದರೆ ಸಾಂಕ್ರಾಮಿಕದ ಸಂದರ್ಭದಲ್ಲಿ ಸಂಕಷ್ಟದಲ್ಲಿ ಸಿಲುಕಿರುವವರಿಗೆ ಪೊಲೀಸ್‌ ಸಿಬ್ಬಂದಿ ಸಹಾಯ ಮಾಡುತ್ತಿರುವುದನ್ನು ಜನರು ಗಮನಿಸಿದ್ದರು. ಆಗ ಪೊಲೀಸರ ಬಗೆಗಿನ ಜನರ ಭಾವನೆ ಸ್ವಲ್ಪ ಮಟ್ಟಿಗೆ ಬದಲಾಗಿತ್ತು. ಆದರೆ ಈಗ ಮತ್ತೆ ಜನರಲ್ಲಿ ನಕಾರಾತ್ಮಕ ಗ್ರಹಿಕೆ ಮನೆ ಮಾಡಿದೆ” ಎಂದರು.

ಇನ್ನು ಉಗ್ರರ ವಿರುದ್ಧದ ಹೋರಾಟ, ದೇಶದ ಭದ್ರತೆ ವೇಳೆ ನಮ್ಮ ಪೊಲೀಸ್‌ ಅಧಿಕಾರಿಗಳು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದು, ಅವರು ಕೂಡ ಜನರಿಗಾಗಿ ಹಲವು ದಿನಗಳ ಕಾಲ ಮನೆಗೆ ಹೋಗದೆ ಕಾರ್ಯನಿರ್ವಹಿಸಿದ್ದಾರೆ.ಆದರೂ ಜನರಲ್ಲಿ ಅವರ ಬಗೆಗಿರುವ ಮನೋಭಾವನೆಯೇ ಬೇರೆ. ಹಾಗಾಗಿ ಪೊಲೀಸ್‌ ಪಡೆಗೆ ಸೇರ್ಪಡೆಯಾಗುವ ಹೊಸ ಪೀಳಿಗೆಯು ಜನರ ಈ ಗ್ರಹಿಕೆಯನ್ನು ಬದಲಾಯಿಸಬೇಕು” ಎಂದು ಹೇಳಿದ್ದಾರೆ.

- Advertisement -

Related news

error: Content is protected !!