Friday, March 29, 2024
spot_imgspot_img
spot_imgspot_img

ಕೊರೊನಾ ಸೋಂಕು ನಿಯಂತ್ರಣ ಮತ್ತು ಲಸಿಕೆ ವಿತರಣೆ ವಿಚಾರವಾಗಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

- Advertisement -G L Acharya panikkar
- Advertisement -

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಪರಿಸ್ಥಿತಿ ಹಾಗೂ ವ್ಯಾಕ್ಸಿನೇಷನ್ ವಿಚಾರವಾಗಿ ನಿನ್ನೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ಕ್ಯಾಬಿನೆಟ್ ಸೆಕ್ರೆಟರಿ, ಆರೋಗ್ಯ ಇಲಾಖೆ ಕಾರ್ಯದರ್ಶಿ, ನೀತಿ ಆಯೋಗದ ಸದಸ್ಯ ಡಾ.ಪೌಲ್ ಸಭೆ ಮುಂತಾದವರು ಸಭೆಯಲ್ಲಿ ಭಾಗಿಯಾಗಿದ್ದರು. ಲಸಿಕೆ ವಿತರಣೆ, ಸೋಂಕು ನಿಯಂತ್ರಣ ಮುಂತಾದ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ಹೇಳಿವೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 93,249 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 513 ಸೋಂಕಿತರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರವೊಂದರಲ್ಲೇ 50 ಸಾವಿರ ಪ್ರಕರಣಗಳು ವರದಿಯಾಗಿವೆ.

ಈವರೆಗೆ ವರದಿಯಾದ ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ 1,24,85,509 ಆಗಿದೆ. ಇಲ್ಲಿವರೆಗೆ ಒಟ್ಟು 1,64,623 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು 6,91,597 ಆ್ಯಕ್ಟಿವ್ ಕೇಸ್​ಗಳಿವೆ.

- Advertisement -

Related news

error: Content is protected !!