Sunday, May 5, 2024
spot_imgspot_img
spot_imgspot_img

ಕೊರೊನಾ ಮಾತ್ರವಲ್ಲ ಭವಿಷ್ಯದ ಯಾವುದೇ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟಕ್ಕೆ ದೇಶ ಸಜ್ಜು- ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ನವದೆಹಲಿ: ದೇಶದ ಆರೋಗ್ಯ ವಲಯವನ್ನು ಕೊರೊನಾ ಮಾತ್ರವಲ್ಲ ಭವಿಷ್ಯದ ಯಾವುದೇ ಸಾಂಕ್ರಾಮಿಕ ರೋಗದ ವಿರುದ್ದ ಹೋರಾಟಕ್ಕೆ ಸಜ್ಜುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಆರೋಗ್ಯ ವಲಯಕ್ಕೆ ಸಂಬಂಧಿಸಿದಂತೆ ಬಜೆಟ್ ಅಂಶಗಳ ಕುರಿತು ವೆಬಿನಾರ್ ಮೂಲಕ ಮಾತನಾಡುವ ವೇಳೆ ಹೇಳಿದ್ದಾರೆ.

ಈ ಬಾರಿ ಆರೋಗ್ಯ ವಲಯಕ್ಕೆ ಹಿಂದೆಂದೂ ನೀಡದಷ್ಟು ಆದ್ಯತೆ, ಪ್ರಾಮುಖ್ಯತೆ ನೀಡಲಾಗಿದೆ. ಅಧಿಕ ಅನುದಾನವನ್ನೂ ನೀಡಲಾಗಿದೆ. ಎಲ್ಲ ದೇಶವಾಸಿಗಳ ಸ್ವಾಸ್ಥ್ಯ ಬದ್ದತೆಯ ಪ್ರತೀಕ ಇದು. ದೇಶ ಕೊರೊನಾ ಅಗ್ನಿ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಿದ್ದು, ದೇಶದ ಪ್ರಯೋಗಾಲಯ ಸೇರಿದಂತೆ ಆರೋಗ್ಯ ವಲಯದಲ್ಲಿ ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಮೂಲಸೌಕರ್ಯವನ್ನು ಭಾರಿ ಪ್ರಮಾಣದಲ್ಲಿ ವೃದ್ಧಿಸಲಾಗಿದೆ ಎಂದು ಹೇಳಿದರು.

ಮುಂದೆ ಎದುರಾಗಬಹುದಾದ ಸಾಂಕ್ರಾಮಿಕಗಳ ವಿರುದ್ಧ ಹೋರಾಡಲು ಆರೋಗ್ಯ ಕ್ಷೇತ್ರದ ಬಲವರ್ಧನೆ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಗತ್ಯಕ್ರಮ ಕೈಗೊಳ್ಳಲಾಗುತ್ತಿದೆ. ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಪಿಎಂ ಆತ್ಮನಿರ್ಭರ ಸ್ವಾಸ್ಥ್ಯ ಭಾರತ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ದೇಶದ ಆರೋಗ್ಯ ವಲಯದಲ್ಲಿ ಇದು ಮಹತ್ವದ ಬದಲಾವಣೆ ತರಲಿದೆ ಎಂದು ಹೇಳಿದರು.

ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಲಾಗಿರುವ ಎಲ್ಲ ಯೋಜನೆಗಳು ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ಈ ಹಿನ್ನೆಲೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಅಗತ್ಯ ಸಿದ್ದತೆ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

- Advertisement -

Related news

error: Content is protected !!