Saturday, April 20, 2024
spot_imgspot_img
spot_imgspot_img

ದೇಶದ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ನವದೆಹಲಿ: ದೇಶದ ಜನರಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ, ಈ ಹಬ್ಬ ಜನರ ಬದುಕಿನಲ್ಲಿ ಹೊಸ ಹುರುಪು ಮತ್ತು ಚೈತನ್ಯವನ್ನು ತುಂಬಲಿ ಎಂದು ಆಶಿಸಿದ್ದಾರೆ. ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು, ಖುಷಿ, ಸಂತಸ, ನಗು ಮತ್ತು ಉತ್ಸಾಹದ ಈ ಹಬ್ಬ ಪ್ರತಿಯೊಬ್ಬರ ಬದುಕಿನಲ್ಲಿ ಹುರುಪು ಮತ್ತು ನವ ಚೈತನ್ಯವನ್ನು ತುಂಬಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ದೇಶದ ಎಲ್ಲ ನಾಗರಿಕರಿಗೆ ಹೋಳಿ ಹಬ್ಬದ ಶುಭಾಶಯಗಳ. ಬಣ್ಣಗಳ ಈ ಹಬ್ಬವು ಸಾಮಾಜಿಕ ಸಾಮರಸ್ಯದ ಹಬ್ಬ. ಈ ಹಬ್ಬ ಜನರ ಬದುಕಿನಲ್ಲಿ ಖುಷಿ ಮತ್ತು ನಿರೀಕ್ಷೆಯನ್ನು ತರಲಿ. ನಮ್ಮ ದೇಶದ ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಪ್ರಧಾನ ಪಾತ್ರವಹಿಸುವ ದೇಶಭಕ್ತಿಯ ಭಾವನೆಯನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್ ಮೊದಲಾದ ಗಣ್ಯರು ಟ್ವಿಟರ್ ನಲ್ಲಿ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ.

ದೇಶದ ಸಮಸ್ತ ಜನರಿಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬಣ್ಣಗಳ ಈ ಹಬ್ಬ ಏಕತೆ, ಸಂತೋಷ, ಶಾಂತಿ ಮತ್ತು ಎಲ್ಲರಿಗೂ ಒಳಿತು ಉಂಟುಮಾಡಲಿ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಹೋಳಿ ಹಬ್ಬದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು. ಬಣ್ಣಗಳು ಈ ಹಬ್ಬವು ಎಲ್ಲರಿಗೂ ಸಂತೋಷ, ಆರೋಗ್ಯ ಮತ್ತು ಸಮೃದ್ದಿಯನ್ನು ತರಲಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಹೋಳಿ ಹಬ್ಬವು ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ದಿಯನ್ನು ನೀಡಲಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯ ಕೋರಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೋಳಿ ಹಬ್ಬದ ಆಚರಣೆ ವೇಳೆ ಕೊರೊನಾ ಮಾರ್ಗಸೂಚಿಯನ್ನು ಪಾಲಿಸಿ ಎಂದು ಹೇಳಿದ್ದಾರೆ.

- Advertisement -

Related news

error: Content is protected !!