- Advertisement -
- Advertisement -
ನವದೆಹಲಿ: ಸೂಪರ್ಸ್ಟಾರ್ ರಜನಿಕಾಂತ್ 51ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ತಲೈವಾಗೆ ಅಭಿನಂದಿಸುತ್ತಿದ್ದಾರೆ.

ತಲೆಮಾರುಗಳಿಂದ ಜನಪ್ರಿಯವಾಗಿ, ಹಲವರು ಹಮ್ಮೆ ಪಡುವಂಥ ಕೆಲಸ ಮಾಡುತ್ತಾ, ವೈವಿಧ್ಯಮಯ ಪಾತ್ರಗಳು ಮತ್ತು ಪ್ರೀತಿಯ ವ್ಯಕ್ತಿತ್ವವನ್ನು ಹೊಂದಿರುವ ರಜನಿಕಾಂತ್ ರವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿರುವುದು ಅತ್ಯಂತ ಸಂತೋಷದ ಸಂಗತಿ. ಅವರಿಗೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.


- Advertisement -








