Thursday, May 2, 2024
spot_imgspot_img
spot_imgspot_img

ಜನವರಿ 22, ಕ್ಯಾಲೆಂಡರ್‌ನಲ್ಲಿ ಬರುವ ದಿನಾಂಕವಲ್ಲ, ಇದು ಹೊಸ ಯುಗದ ಆರಂಭ: ಅಯೋಧ್ಯೆಯಲ್ಲಿ ಮೋದೀಜಿ ಸಂತಸ

- Advertisement -G L Acharya panikkar
- Advertisement -

ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆಯನ್ನು ಪ್ರಧಾನಿ ಮೋದಿ ನೆರವೇರಿಸಿ ಬಳಿಕ ಳಿಕ ಬೃಹತ್‌ ವೇದಿಕೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಶುಭ ಸಂದರ್ಭದಲ್ಲಿ ನಾನು ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಹೇಳಲು ತುಂಬಾ ವಿಷಯಗಳಿವೆ. ಆದ್ರೆ ಸಂತಸದಿಂದ ನನಗೆ ಮಾತೇ ಬರುತ್ತಿಲ್ಲ. ಇನ್ಮುಂದೆ ನಮ್ಮ ರಾಮ ಟೆಂಟ್‌ನಲ್ಲಿ ವಾಸಿಸುವುದಿಲ್ಲ, ಅದ್ಧೂರಿ ದೇವಾಲಯದಲ್ಲಿ ವಿರಾಜಮಾನನಾಗಿರುತ್ತಾನೆ. ಈ ಸಮರ್ಪಣೆಯ ಕ್ಷಣವು ಭಗವಾನ್ ರಾಮನ ಆಶೀರ್ವಾದ ಎಂದು ಎಂದರು.

ಜನವರಿ 22, ಕ್ಯಾಲೆಂಡರ್‌ನಲ್ಲಿ ಬರುವ ದಿನಾಂಕವಲ್ಲ. ಇದು ಹೊಸ ಯುಗದ ಉದಯ ಎಂದು ಕೊಂಡಾಡಿದರು. ಜನವರಿ 22ರಂದು ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ʻಶ್ರೀರಾಮಜ್ಯೋತಿʼ ಬೆಳಗಿಸುವಂತೆ ಕರೆ ನೀಡಿದರು.

ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ.ಈ ಶುಭ ಘಳಿಗೆಯಲ್ಲಿ ಎಲ್ಲರಿಗೂ ಶುಭಾಶಯ ಎಂದಿದ್ದಾರೆ.ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸದ ಉದಯವಾಗಲಿದೆ. ದೇಶದಲ್ಲಿ ಇಂದು ಪ್ರತಿದಿನವೂ ಒಂದು ವಿಶ್ವಾಸ ಮೂಡುತ್ತಿದೆ. ಈ ಕ್ಷಣ ದೈವಿಕ ಅನುಭವವನ್ನು ಪಡೆಯುತ್ತಿದ್ದೇನೆ. ಪ್ರಭು ಶ್ರೀರಾಮನ ಬಳಿ ನಾನು ಕ್ಷಮೆಯಾಚಿಸುತ್ತೇನೆ. ಇಷ್ಟು ವರ್ಷಗಳ ಕಾಲ ನಾವು ಸಮಯ ತೆಗೆದುಕೊಂಡಿದ್ದಕ್ಕೆ ಕ್ಷಮೆಯಾಚಿಸುವೆ. ಶ್ರೀರಾಮನ ಆಗಮನದಿಂದ ಇಡೀ ದೇಶ ಸಂಭ್ರಮಗೊಂಡಿದೆ. ಕೊನೆಗೂ ನಮ್ಮ ರಾಮ ಬಂದಿದ್ದಾನೆ. ಪ್ರತಿಯೊಬ್ಬ ಭಾರತೀಯನ ಅಂತರಂಗದಲ್ಲಿ ನೆಲೆಸಿದ್ದಾನೆ ಎಂದು ಬಣ್ಣಿಸಿದ್ದಾರೆ.

- Advertisement -

Related news

error: Content is protected !!