Tuesday, April 30, 2024
spot_imgspot_img
spot_imgspot_img

ಮಧ್ಯಪ್ರದೇಶದ ನೂತನ ಸಿ.ಎಂ ಆಗಿ ಮೋಹನ್‌ ಯಾದವ್‌ ಆಯ್ಕೆ

- Advertisement -G L Acharya panikkar
- Advertisement -

ಒಂದು ವಾರದ ಕುತೂಹಲಕ್ಕೆ ತೆರೆ ಎಳೆದು ಬಿಜೆಪಿ ಇಂದು ಮೋಹನ್ ಯಾದವ್ ಅವರನ್ನು ಮಧ್ಯಪ್ರದೇಶದ ಹೊಸ ಮುಖ್ಯಮಂತ್ರಿ ಎಂದು ಘೋಷಿಸಿತು. ಯಾದವ್ ಅವರು ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ನವೆಂಬರ್ 17 ರಂದು ನಡೆದ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಪಡೆದುಕೊಂಡಿದೆ. ಡಿಸೆಂಬರ್ 3 ರಂದು ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸಲಾಯಿತು.

ಮೂವರು ಕೇಂದ್ರ ವೀಕ್ಷಕರು ಭಾಗವಹಿಸಿದ್ದ ರಾಜ್ಯದ ರಾಜಧಾನಿ ಭೋಪಾಲ್‌ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯ ನಂತರ 58 ವರ್ಷದ ಮೋಹನ್ ಯಾದವ್ ಅವರ ಹೆಸರನ್ನು ಅಂತಿಮಗೊಳಿಸಲಾಯಿತು. ಇವರು ಈ ಹಿಂದೆ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಮೋಹನ್ ಯಾದವ್ ಉಜ್ಜಯಿನಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದಾರೆ. ಅವರು ಮೊದಲು 2013 ರಲ್ಲಿ ಶಾಸಕರಾಗಿ ಆಯ್ಕೆಯಾದರ. ಆನಂತರ 2018 ರಲ್ಲಿ ಎರಡನೇ ಬಾರಿಗೆ ಅದೇ ಸ್ಥಾನವನ್ನು ಗೆದ್ದರು. ಹೆಸರಾಂತ ಉದ್ಯಮಿಯೂ ಆಗಿರುವ ಇವರು ಹಲವಾರು ವರ್ಷಗಳಿಂದ ಬಿಜೆಪಿಯಲ್ಲಿದ್ದಾರೆ.

- Advertisement -

Related news

error: Content is protected !!