Thursday, July 10, 2025
spot_imgspot_img
spot_imgspot_img

ಮಾಲಿವುಡ್ ನ ಖ್ಯಾತ ನಟ ಅನುಮಾನಾಸ್ಪದ ಸಾವು!

- Advertisement -
- Advertisement -

ತಿರುವನಂತಪುರಂ: ಮಾಲಿವುಡ್ ನ ಖ್ಯಾತ ನಟ ರಮೇಶ್ ವಲಿಯಶಾಳ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.

vtv vitla

ನಟ ರಮೇಶ್ ಅವರು ಎರಡು ದಿನಗಳ ಹಿಂದೆ ತಮ್ಮ ಹೊಸ ಪ್ರಾಜೆಕ್ಟ್ ಗಾಗಿ ಶೂಟಿಂಗ್ ಸ್ಥಳದಿಂದ ಹಿಂದಿರುಗಿದ್ದರು. ತಮ್ಮ ನಿವಾಸದ ಸಮೀಪವೇ ನೇಣು ಬಿಗಿದ ಸ್ಥಿತಿಯಲ್ಲಿ ರಮೇಶ್ ವಲಿಯಶಾಳ ಮೃತದೇಹ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳನ್ನು ಮೂಡಿಸಿದೆ. ಅವರು ಆರ್ಥಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಕೇರಳ ರಾಜ್ಯದ ಅತ್ಯಂತ ಜನಪ್ರಿಯ ಟಿವಿ ಧಾರಾವಾಹಿ ನಟರಲ್ಲಿ ಒಬ್ಬರಾಗಿದ್ದ ರಮೇಶ್, ಹಲವಾರು ಚಲನಚಿತ್ರ ಗಳಲ್ಲಿ ನಟಿಸಿದ್ದಾರೆ. ಸುಮಾರು 22 ವರ್ಷಗಳಿಂದ ನಾಟಕ ಮತ್ತು ಧಾರಾವಾಹಿ ಕ್ಷೇತ್ರದಲ್ಲಿ ರಮೇಶ್ ತೊಡಗಿಸಿಕೊಂಡಿದ್ದರು.

- Advertisement -

Related news

error: Content is protected !!