ಬೆಂಗಳೂರು: ಮಂಕಿಪಾಕ್ಸ್ ಕಾಯಿಲೆ ಆತಂಕ ಹೆಚ್ಚಾಗುತ್ತಿದ್ದಂತೆ ಆರೋಗ್ಯ ಇಲಾಖೆ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶವನ್ನು ಹೊರಡಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಸುತ್ತೋಲೆ ಪ್ರಕಟಿಸಿದೆ.
ನೆರೆಯ ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ ಪತ್ತೆಯಾಗಿದೆ. ಈ ಕಾರಣದಿಂದ ರಾಜ್ಯ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಪ್ರಯಾಣಿಕರ ತಪಾಸಣೆ ಮಾಡುವಂತೆ ಸೂಚನೆ ನೀಡಿದೆ.ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡುವಂತೆ ಇಲಾಖೆ ಹೇಳಿದೆ.
ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆ ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಮಂಕಿಪಾಕ್ಸ್ ಕಂಡು ಬಂದರೆ 21 ದಿನಗಳ ಕ್ವಾರಂಟೈನ್, ಗುಳ್ಳೆಗಳು ಸಂಪೂರ್ಣ ವಾಸಿಯಾಗುವರೆಗೂ ಚಿಕಿತ್ಸೆ ನೀಡಲಾಗುತ್ತದೆ ಮತ್ತು ಸೋಂಕಿತರು ಮತ್ತೊಬ್ಬರ ಸಂಪರ್ಕಕ್ಕೆ ಬಾರದಂತೆ ಕ್ವಾರಂಟೈನ್‌ನಲ್ಲಿ ಇರಿಸಬೇಕು ಎಂಬುವುದಾಗಿ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ.