Tuesday, September 28, 2021
spot_imgspot_img
spot_imgspot_img

ಮೂಡಬಿದ್ರೆ: ಆಳ್ವಾಸ್ ಕಾಲೇಜಿನ ಹಾಸ್ಟೆಲ್ ಕಟ್ಟಡದ 5ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ!

- Advertisement -
driving
- Advertisement -

ಮೂಡಬಿದ್ರೆ: ಆಳ್ವಾಸ್ ಕಾಲೇಜಿನ ಪಿಯು ವಿದ್ಯಾರ್ಥಿಯೊಬ್ಬ ಇಲ್ಲಿನ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಬೆಳಗಾವಿ ಮೂಲದ ರಜತ್(18) ಎನ್ನಲಾಗಿದೆ.

ಆಳ್ವಾಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ ಹಾಸ್ಟೆಲ್ ನಲ್ಲಿದ್ದುಕೊಂಡು ಓದುತ್ತಿದ್ದ. ನಿನ್ನೆ ಮಧ್ಯಾಹ್ನ ವೇಳೆ ಆತ ತನ್ನ ಮನೆಯವರಿಗೆ ಕರೆ ಮಾಡಿದ್ದಾನೆ. ಆದರೆ ಯಾವುದೇ ರೀತಿಯಲ್ಲೂ ತನ್ನ ನೋವನ್ನು ವ್ಯಕ್ತಪಡಿಸಿರಲಿಲ್ಲ ಎನ್ನಲಾಗಿದೆ. ಆದರೆ, ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದ 5ನೇ ಮಹಡಿಯಿಂದ ಹಾರಿದ್ದಾನೆ. ಕೂಡಲೇ ಹಾಸ್ಟೆಲ್ ಸಿಬ್ಬಂದಿ ವಿದ್ಯಾರ್ಥಿಯನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ.

ಮೂಡುಬಿದ್ರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಯುವಕ ಕೋಮಾ ಸ್ಥಿತಿಯಲ್ಲಿದ್ದಾನೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ.

- Advertisement -
- Advertisement -

MOST POPULAR

HOT NEWS

Related news

error: Content is protected !!