Monday, June 8, 2026
spot_imgspot_img
spot_imgspot_img

ಮೂಡಬಿದಿರೆ: ಜಗಳ ತಾರಕಕ್ಕೇರಿ ಹೆಂಡತಿಯನ್ನು ಕೊಲೆಗೈದ ಗಂಡ!

- Advertisement -
- Advertisement -

ಮೂಡುಬಿದಿರೆ: ಹೆಂಡತಿಯನ್ನು ಗಂಡ ಕೊಲೆಗೈದ ಘಟನೆ ತಾಲೂಕಿನ ಧರೆಗುಡ್ಡೆ, ಗ್ರಾ.ಪಂ ವ್ಯಾಪ್ತಿಯ ಮಠ ಎಂಬಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ದಿನ್ ರಾಜ್ ಬಂಧಿತ ಆರೋಪಿ. ಸುನೀತಾ (30) ಕೊಲೆಯಾದ ದುರ್ದೈವಿ ಎನ್ನಲಾಗಿದೆ.

ಒಂದೂವರೆ ವರ್ಷದ ಹಿಂದೆ ಮದುವೆಯಾಗಿತ್ತು. ನಿನ್ನೆ ಸಂಜೆ ಗಂಡ- ಹೆಂಡತಿಯ ಮಧ್ಯೆ ಜಗಳ ನಡೆದು ತಾರಕಕ್ಕೇರಿದಾಗ ಗಂಡ ದಿನ್ ರಾಜ್ ಹೆಂಡತಿಯ ತಲೆಗೆ ಹೊಡೆದಿದ್ದಾನೆ ಎನ್ನಲಾಗಿದೆ. ರಕ್ತ ಸೋರುತ್ತಿರುವುದನ್ನು ಕಂಡ ದಿನ್ ರಾಜ್ ಸುನೀತಾ ಅವರ ಸಹೋದರ ಸಂಬಂಧಿಗೆ ಕರೆ ಮಾಡಿದ್ದಾನೆ. ಮೊದಲಿಗೆ ಬೆಳುವಾಯಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ದಾಖಲಿಸಲು ನಿರಾಕರಿಸಿದ್ದಾಗ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಅಲ್ಲಿ ಅಧಿಕ ರಕ್ತಸ್ರಾವ ಆಗಿರುವುದರಿಂದ ಚಿಕಿತ್ಸೆಗೆ ಸ್ಪಂದಿಸದ ಸುನೀತಾ ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಮೂಡಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಮಂಗಳೂರಿನ ವೆನ್ನಾಕ್ ಆಸ್ಪತ್ರೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಸಿದ್ಧತೆ ನಡೆಸುತ್ತಿದ್ದಾರೆ.

driving
- Advertisement -

Related news

error: Content is protected !!