- Advertisement -
- Advertisement -



ಮೂಡುಬಿದಿರೆ: ಇಲ್ಲಿನ ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂಡೇಲು ಸುತ್ತಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕ್ ಅಪ್ ವಾಹನವೊಂದು ಮಗುಚಿಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಮೃತರನ್ನು ಎಡಪದವು ಕನ್ನೊಳಿ ನಿವಾಸಿ ಯಾದವ ಎಂದು ಗುರುತಿಸಲಾಗಿದೆ.

ಮೂಡುಬಿದಿರೆ ಕಡೆಯಿಂದ ಎಡಪದವಿಗೆ ಪಿಕ್ ವಾಹನವನ್ನು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ, ಹಂಡೇಲು ತಿರುವಿನಲ್ಲಿ ಪಿಕ್ ಅಪ್ ವಾಹನ ಪಲ್ಟಿಯಾಗಿ, ತೆಂಗಿನ ಮರಕ್ಕೆ ಢಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಯಾದವ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಘಟನೆಯ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


- Advertisement -








