Tuesday, August 11, 2026
spot_imgspot_img
spot_imgspot_img

ಮೂಡಬಿದಿರೆ: ಬಾಡಿಗೆ ಮನೆಯಲ್ಲಿ ಸಿಲಿಂಡರ್ ಸ್ಫೋಟ- ಒಂದೇ ಕುಟುಂಬದ ಮೂವರಿಗೆ ಸುಟ್ಟ ಗಾಯ, ಒಬ್ಬರ ಸ್ಥಿತಿ ಗಂಭೀರ

- Advertisement -
- Advertisement -

ಮೂಡಬಿದಿರೆ: ಮಿಜಾರ್ ಬಳಿ ಇಂದು ಬೆಳಗ್ಗೆ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಒಂದೇ ಕುಟುಂಬದ ಮೂವರಿಗೆ ಸುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.

ಬೆಳಗ್ಗೆ ಸುಮಾರು 6:30 ಗಂಟೆಗೆ ಬಾಡಿಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ. ಈ ವೇಳೆ ಮನೆಯಲ್ಲಿದ್ದ ಮೂವರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಆಳ್ವಾಸ್ ಕಾಲೇಜಿನಲ್ಲಿ ವಾಚ್‌ಮ್ಯಾನ್ ಆಗಿ ಕೆಲಸ ಮಾಡುತ್ತಿರುವ ಶಿವರಾಮ (31), ಅವರ ಪತ್ನಿ ಗಂಗಾ (25) ಮತ್ತು ಅವರ 6 ವರ್ಷದ ಮಗ ಆದರ್ಶ್ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಶಿವರಾಮ ಅವರಿಗೆ ತೀವ್ರತರದ ಸುಟ್ಟ ಗಾಯಗಳಾಗಿದ್ದು, ಪತ್ನಿ ಗಂಗಾ ಮತ್ತು ಮಗ ಆದರ್ಶ್ ಅವರಿಗೂ ಸುಟ್ಟ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!