Sunday, April 28, 2024
spot_imgspot_img
spot_imgspot_img

ಮೂಡಬಿದಿರೆ : ಬೈಕ್ ಮತ್ತು ಖಾಸಗಿ ಬಸ್ ಅಪಘಾತ; ಸವಾರ ಮೃತ್ಯು

- Advertisement -G L Acharya panikkar
- Advertisement -

ಮೂಡಬಿದಿರೆ :ಬೈಕು ಮತ್ತು ಖಾಸಗಿ ಬಸ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಬೈಕ್ ಹಿಂಬದಿಯಲ್ಲಿದ್ದ ಸಹ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.

ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು ರಾಜೇಶ್ವರೀ ಜ್ಯುವೆಲರ್ಸ್’ನ ಚಂದ್ರಹಾಸ ಆಚಾರ್ಯ ಅವರ ಪುತ್ರ ಕಾರ್ತಿಕ್ ಆಚಾರ್ಯ(19) ಮೃತಪಟ್ಟವರು.

ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ ಹರ್ಷ ಎಂಬವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಕಾರ್ತಿಕ್ ಅವರು ಕಾಲೇಜು ಮುಗಿಸಿ ತನ್ನ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಮಂಗಳೂರಿನಿಂದ ಮೂಡುಬಿದಿರೆಗೆ ಬರುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಮತ್ತೊಂದು ಬಸ್ಸನ್ನು ಓವರ್‌ಟೇಕ್ ಮಾಡುವ ಭರದಲ್ಲಿ ತೀರ ಬಲಭಾಗಕ್ಕೆ ಚಲಿಸಿ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಕಾರ್ತಿಕ್ ಹೆಲ್ಮೆಟ್ ಧರಿಸಿದ್ದರೂ ಬಸ್ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆ ಅಮಾಯಕ ಜೀವ ಬಲಿಯಾಗಿದೆ. ಮೂಡುಬಿದಿರೆ ಪೊಲೀಸರು ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!