Friday, July 24, 2026
spot_imgspot_img
spot_imgspot_img

ಮೂಡುಬಿದಿರೆ: 60 ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ..!

- Advertisement -
- Advertisement -

ಮೂಡುಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಮಿಜಾರಿನಲ್ಲಿ 60 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಹಸುವೊಂದನ್ನು ಮೂಡುಬಿದಿರೆ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಸೋಮವಾರ(ಜ.26) ನಡೆದಿದೆ.

ಬಡಗಮಿಜಾರು ನಿವಾಸಿ ಜಯರಾಮ್ ಗೌಡ ಅವರಿಗೆ ಸೇರಿದ 60 ಅಡಿ ಆಳ ಮತ್ತು 5 ಅಡಿ ಅಗಲದ ಬಾವಿಗೆ ಹಸು ಬಿದ್ದಿರುವುದು ಗಮನಿಸಿದ ಮನೆಯವರು ಹಾಗೂ ಸ್ಥಳೀಯರು ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಾವಿಗೆ ಇಳಿದು, ಹಸುವಿಗೆ ಯಾವುದೇ ಗಾಯವಾಗದಂತೆ ಹಗ್ಗದ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆತ್ತಿದರು.

60 ಅಡಿ ಆಳವಿದ್ದರೂ ಸಮಯಪ್ರಜ್ಞೆ ಹಾಗೂ ನಿಪುಣತೆಯಿಂದ ಕಾರ್ಯಾಚರಣೆ ನಡೆಸಿದ ಸಿಬ್ಬಂದಿಗಳ ಕಾರ್ಯಕ್ಕೆ ಸಾರ್ವಜನಿಕ ವಲಯವು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದೆ.

- Advertisement -

Related news

error: Content is protected !!