Wednesday, July 22, 2026
spot_imgspot_img
spot_imgspot_img

ಮೂಡುಬಿದಿರೆ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಮಹಿಳೆಯಿಂದ ದೂರು ದಾಖಲು

- Advertisement -
- Advertisement -

ಮಂಗಳೂರು: ಮಹಿಳೆಯೊಬ್ಬರು ಮೂಡಬಿದರೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಂದೇಶ್ ಪಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿ ಮೂವರು ಮಹಿಳೆಯರು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಎರಡು ವರ್ಷಗಳ ಹಿಂದೆ ಮಹಿಳೆಯೋರ್ವರ ಪತಿಯನ್ನು ಒಂದು ಪ್ರಕರಣದಲ್ಲಿ ಬಂಧಿಸಲಾಗಿತ್ತು. ನಿನ್ನ ಪತಿಯನ್ನು ಬಿಡುಗಡೆ ಮಾಡಬೇಕಾದರೆ ನೀನು ಲೈಂಗಿಕವಾಗಿ ಸಹಕರಿಸಬೇಕು ಎಂದು ಇನ್ಸ್‌ಪೆಕ್ಟರ್ ಪೀಡಿಸಿದ್ದರ ಜೊತೆಗೆ 25 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆಯನ್ನೂ ಇಟ್ಟಿದ್ದರು. ಪತಿಯ ವಿರುದ್ಧ ರೌಡಿಶೀಟರ್ ತೆರೆಯುವುದಾಗಿ ಬೆದರಿಕೆ ಹಾಕಿದ್ದರು- ಎಂದು ಓರ್ವ ಮಹಿಳೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಇನ್ಸ್‌ಪೆಕ್ಟರ್ ರಾತ್ರಿ ವೇಳೆ ಕಾಂಪೌಂಡ್ ಗೋಡೆ ಜಿಗಿದು ಮನೆಗೆ ನುಗ್ಗುತ್ತಿದ್ದರು, ಕೈ ಹಿಡಿದು ಎಳೆದಾಡುತ್ತಿದ್ದರು ಮತ್ತು ಬಲವಂತವಾಗಿ ಡ್ಯಾನ್ಸ್ ಮಾಡುವಂತೆ ಪೀಡಿಸುತ್ತಿದ್ದರು. ಈ ಹಿಂದೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿದ್ದಾಗಲೂ ಅವರು ಇದೇ ರೀತಿ ವರ್ತಿಸಿದ್ದರು. ಪಾಸ್‌ಪೋರ್ಟ್ ಪರಿಶೀಲನೆ ಮತ್ತು ಇತರ ಕೆಲಸಗಳಿಗಾಗಿ ಠಾಣೆಗೆ ಬರುವ ಮಹಿಳೆಯರಿಗೂ ಇವರು ಲೈಂಗಿಕ ಕಿರುಕುಳ ನೀಡುತ್ತಿದ್ದರು, ಆದರೆ ಸಂತ್ರಸ್ತರು ದೂರು ನೀಡಲು ಹಿಂಜರಿಯುತ್ತಿದ್ದರು ಎಂದು ಹೇಳಲಾಗಿದೆ.

ಈ ಹಿಂದೆ ಮೇಲಾಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಮಂಗಳೂರು ಪೊಲೀಸರಿಂದ ನ್ಯಾಯಯುತ ತನಿಖೆ ನಡೆಯುವ ಬಗ್ಗೆ ಸಂಶಯವಿದೆ ಎಂದು ದೂರುದಾರರು ತಿಳಿಸಿದ್ದು, ಈ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ಅಥವಾ ಸಿಐಡಿ ತನಿಖೆಗೆ ಒಪ್ಪಿಸಬೇಕು ಮತ್ತು ಅಧಿಕಾರಿಯನ್ನು ಕರ್ತವ್ಯದಿಂದ ದೂರವಿರಿಸಬೇಕು ಎಂಬುದಾಗಿ ಮಹಿಳೆಯರು ಆರೋಪಿಸಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!