- Advertisement -
- Advertisement -


ಮೂಡಬಿದ್ರೆ: ಮೂಡಬಿದ್ರೆ ಸಮೀಪದ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಪುತ್ರ ಮನೋಜ್ (22) ಎಂದು ಗುರುತಿಸಲಾಗಿದೆ.
ಮಂಗಳೂರಿನ ಇಬ್ಬರು ಸಿ.ಎ.ಅಂತಿಮ ವರ್ಷದ ವಿದ್ಯಾರ್ಥಿಗಳಾದ ಕೇರಳ ಅಡೂರು ನಿವಾಸಿ ಕಾರ್ತಿಕ್(22), ಪುತ್ತೂರು ಇರ್ದೆ ನಿವಾಸಿ ಮನೋಜ್. ಎನ್. ಮೂಡಬಿದ್ರೆ ಸಮೀಪದ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದರು. ಈ ವೇಳೆ ದಾರಿ ಮಧ್ಯೆ ಅಸ್ವಸ್ಥಗೊಂಡು ಕುಸಿದು ಬಿದ್ದ ಮನೋಜ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಈ ಬಗ್ಗೆ ಮೂಡಬಿದಿರೆ ಪೊಲೀಸರಿಂದ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
- Advertisement -








