Friday, June 19, 2026
spot_imgspot_img
spot_imgspot_img

ಮೂಡಬಿದಿರೆ: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಯುವತಿಗೆ ವಂಚನೆ; ಆರೋಪಿ ಅರೆಸ್ಟ್‌

- Advertisement -
- Advertisement -

ಮೂಡಬಿದಿರೆ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಫೋಟೋಗ್ರಾಫರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮೂಲತಃ ಉಪ್ಪಿನಂಗಡಿ ಬೆದೋಡಿಯ ನಿವಾಸಿ, ಮೂಡಬಿದಿರೆ ಕಲ್ಲಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಸಂಕೇತ್ ಗಾಣಿಗ (31) ಎಂದು ಗುರುತಿಸಲಾಗದೆ.

ಪ್ರಕರಣದ ಆರೋಪಿ ಸಂಕೇತ್ ಉಡುಪಿ ಮೂಲದ ಯುವತಿಯೊಬ್ಬಳೊಂದಿಗೆ ಇನ್ಸ್ಟಾ ಗ್ರಾಂನಲ್ಲಿ ಸಲುಗೆ ಬೆಳೆಸಿ, ಬಳಿಕ ದೈಹಿಕವಾಗಿ ಆಕೆಯನ್ನು ಬಳಸಿಕೊಂಡಿದ್ದಾನೆ. ಆದರೆ ಬಳಿಕ ಜಾತಿಯ ನೆಪವೊಡ್ಡಿ ಮದುವೆಗೆ ನಿರಾಕರಿಸಿದ್ದಾನೆ.

ಯುವತಿ ಮೂಡಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆತನ ವಿರುದ್ಧ ದಲಿತ ದೌರ್ಜನ್ಯ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!