Monday, April 29, 2024
spot_imgspot_img
spot_imgspot_img

ನೇಣುಬಿಗಿದು ತಾಯಿ ಮಗಳು ಆತ್ಮಹತ್ಯೆ

- Advertisement -G L Acharya panikkar
- Advertisement -

ಒಂದೇ ಹಗ್ಗಕ್ಕೆ ಪುತ್ರಿಯ ಜೊತೆಗೆ ನೇಣುಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಮಹಾದೇವಿ ಇಂಚಲ (34) ಚಾಂದನಿ ಇಂಚಲ (7) ಆತ್ಮಹತ್ಯೆಗೆ ಶರಣಾದವರು. ಈ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದಿಂಡಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಮಹಾದೇವಿ ಇಂಚಲ ಅವರು ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದ ಯೋಧನನ್ನು ವರಿಸಿದ್ದರು.

ಏಳು ವರ್ಷಗಳ ಹಿಂದೆ ಪತಿಯ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಮಹಾದೇವಿಯವರು ದಿಂಡಲಕೊಪ್ಪದಲ್ಲಿರುವ ತವರು ಮನೆಯಲ್ಲಿ ಪುತ್ರಿ ಜೊತೆಗೆ ವಾಸವಿದ್ದರು. ಇದೀಗ ಸಹೋದರ ಹಾಗೂ ನಾದಿನಿಯ ಕಿರುಕುಳದಿಂದ ಬೇಸತ್ತು ಪುತ್ರಿಯ ಜೊತೆಗೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಬೆಳಗಾವಿಯ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

Related news

error: Content is protected !!