Saturday, May 4, 2024
spot_imgspot_img
spot_imgspot_img

ಕಾಸರಗೋಡು : ತಾಯಿ ಮತ್ತು ಐದು ವರ್ಷದ ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ

- Advertisement -G L Acharya panikkar
- Advertisement -

ಕಲ್ನಾಡ್ ಅರಮಂಗಾನ ನಿವಾಸಿ ತಾಜುದ್ದೀನ್ ಎಂಬವರ ಪತ್ನಿ ರುಬೀನಾ(33) ಮತ್ತು ಅವರ ಪುತ್ರಿ ಹನಾನ್ ಮರಿಯ (5) ಮೃತದೇಹಗಳು ಬಾವಿಯಲ್ಲಿ ಪತ್ತೆಯಾಗಿವೆ.

ತಾಯಿ-ಮಗಳು ನಾಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಮನೆ ಸಮೀಪದ ಬಾವಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಮಗುವನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪರಿಸರವಾಸಿಗಳ ನೆರವಿನಿಂದ ಮೃತ ದೇಹವನ್ನು ಮೇಲಕ್ಕೆತ್ತಿದರು. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ. ಮೇಲ್ಪರಂಬ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!