Thursday, May 9, 2024
spot_imgspot_img
spot_imgspot_img

ಗರ್ಭಿಣಿ ಮಗಳನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿ ಕೊಂದ ತಾಯಿ, ಮಗ

- Advertisement -G L Acharya panikkar
- Advertisement -

ಮಗಳು ಮದುವೆಯಾಗದೇ ಗರ್ಭಿಣಿಯಾಗಿದ್ದಾಳೆ ಎನ್ನುವ ವಿಚಾರ ತಿಳಿದು ಕೋಪಗೊಂಡ ತಾಯಿ ಆಕೆಯನ್ನು ಕಾಡಿಗೆ ಕರೆದೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದೆ. ತಮ್ಮ 21 ವರ್ಷದ ಅವಿವಾಹಿತ ಮಗಳು ಗರ್ಭಿಣಿಯಾಗಿರುವ ವಿಷಯ ತಿಳಿದು ಆಕ್ರೋಶಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವಿವಾಹಿತ ಮಹಿಳೆ ಅದೇ ಗ್ರಾಮದ ಯುವಕನೊಂದಿಗೆ ದೈಹಿಕ ಸಂಬಂಧ ಹೊಂದಿದ್ದಳು. ಈ ವಿಷಯ ಆಕೆಯ ಕುಟುಂಬಸ್ಥರಿಗೆ ತಿಳಿದಾಗ ಆಕ್ರೋಶಗೊಂಡು, ಯುವತಿಯ ತಾಯಿ ಮತ್ತು ಸಹೋದರ ಆಕೆಯನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿದ್ದಾರೆ.

ಅರಣ್ಯದಲ್ಲಿದ್ದ ಕೆಲವು ರೈತರು ಮಹಿಳೆಯನ್ನು ಗಮನಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲಿನ ವೈದ್ಯರು ಆಕೆಯನ್ನು ಮೀರತ್‌ನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆಕೆಯ ತಾಯಿ ಮತ್ತು ಸಹೋದರನನ್ನು ಬಂಧಿಸಲಾಗಿದೆ. ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

- Advertisement -

Related news

error: Content is protected !!