- Advertisement -
- Advertisement -
ವಿಟ್ಲ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಕರಾಟೆ ಪಂದ್ಯಾಟ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬಾಳ್ತಿಲದಲ್ಲಿ ನಡೆಯಿತು.
14 ರಿಂದ 17ರ ವಯೋಮಾನದ ಬಾಲಕಿಯರ ಕರಾಟೆ ಪಂದ್ಯಾಟದ -34 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ವಿಟ್ಲ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮೌಶ್ಮಿ ಆರ್ ಶೆಟ್ಟಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ಇವರಿಂದ ಕರಾಟೆ ತರಭೇತಿ ಪಡೆಯುತ್ತಿರುವ ಮೌಶ್ಮಿ ಶೆಟ್ಟಿಯವರು ರಾಮ್ ದಾಸ್ ಶೆಟ್ಟಿ ಹಾಗೂ ಸ್ನೇಹ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾರೆ.
- Advertisement -