Wednesday, May 1, 2024
spot_imgspot_img
spot_imgspot_img

ಕಡಬದಲ್ಲಿ ಶಂಕಿತ ನಕ್ಸಲರ ಸಂಚಾರ – ಊಟ ಮಾಡಿ, ದಿನಸಿ ಪಡೆದು ತೆರಳಿದ ಶಂಕಿತರು

- Advertisement -G L Acharya panikkar
- Advertisement -

ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ವೇಳೆ ಶಂಕಿತರ ತಂಡ ಆಗಮಿಸಿ ಊಟ, ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿರುವ ವಿಷಯ ಶುಕ್ರವಾರ ಸಂಜೆ ವೇಳೆಗೆ ಬೆಳಕಿಗೆ ಬಂದಿದೆ.
ಲೋಕಸಭಾ ಚುನಾವಣೆಗೆ 3 ವಾರ ಬಾಕಿಯಿರುವಾಗ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಹಾಗೂ ಸುಬ್ರಹ್ಮಣ್ಯ ತಾಲೂಕಿನ ಅರಣ್ಯದಂಚಿನಲ್ಲಿ ನಕ್ಸಲ್ ಚಲನವಲನ ಅಲ್ಲಲ್ಲಿ ಕಂಡು ಬರುತ್ತಿದೆ. ಕಳೆದೆರಡು ವಾರದಲ್ಲಿ ಮೂರು ಪ್ರತ್ಯೇಕ ಸ್ಥಳಗಳ ಜನವಸತಿ ಪ್ರದೇಶಗಳಲ್ಲಿ ಶಸ್ತ್ರಧಾರಿ ಶಂಕಿತ ನಕ್ಸಲರ ತಂಡ ಕಾಣಿಸಿಕೊಂಡಿದೆ.

ಗುರುವಾರ ಸಂಜೆ ಏಳು ಗಂಟೆ ವೇಳೆ ತಂಡ ಕೊಂಬಾರು ಗ್ರಾಮದ ಚೇರು ಎಂಬಲ್ಲಿನ ಮನೆಗೆ ಆಗಮಿಸಿ ಊಟ ಮಾಡಿದ್ದು, ಸುಮಾರು ಒಂಬತ್ತು ಗಂಟೆ ವೇಳೆ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿದ್ದಾರೆ ಎಂದು ತಿಳಿದುಬಂದಿದೆ.

ತಂಡದಲ್ಲಿ ನಾಲ್ಕರಿಂದ ಆರು ಮಂದಿ ಇದ್ದು, ಮನೆಗೆ ಆಗಮಿಸಿದ ಶಂಕಿತರು ಶಸಾಸ್ತ್ರ ಹಿಡಿದುಕೊಂಡಿದ್ದರು ಎನ್ನಲಾಗಿದೆ.

ಶಂಕಿತರು ಕೊಂಬಾರು ಗ್ರಾಮದ ಚೇರು ಎಂಬಲ್ಲಿನ ಮನೆಗೆ ಆಗಮಿಸಿರುವ ಮಾಹಿತಿ ಇಲಾಖೆಗೆ ಲಭ್ಯವಾಗುತ್ತಲೇ ನಕ್ಸಲ್‌ ನಿಗ್ರಹ ಪಡೆ, ಪೊಲೀಸರು ಮಾಹಿತಿ ಕಲೆ ಹಾಕುವ ಕೆಲಸ ಮಾಡುತ್ತಿದ್ದು, ಎಎನ್‌ಎಫ್‌ ತಂಡ ಮನೆಗೆ ಭೇಟಿ ನೀಡಲಾದ ಆಸು-ಪಾಸು ಪರಿಸರದಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಶಂಕಿತರು ಅದೇ ಪರಿಸರಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದತ್ತ ತೆರಳಿರುವ ಶಂಕೆ ಇದೆ. ಶಂಕಿತರು ಮನೆಗೆ ಆಗಮಿಸಿರುವ ಮಾಹಿತಿ ಇಲಾಖೆಗೆ ಲಭ್ಯವಾಗುತ್ತಲೇ ನಕ್ಸಲ್ ನಿಗ್ರಹ ಪಡೆ, ಪೊಲೀಸರು ಮಾಹಿತಿ ಕಲೆ ಹಾಕುವ ಕೆಲಸ ಮಾಡುತ್ತಿದ್ದು, ಎಎನ್ಎಫ್ ತಂಡ ಮನೆಗೆ ಭೇಟಿ ನೀಡಲಾದ ಆಸು-ಪಾಸು ಪರಿಸರದಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಶಂಕಿತರು ಅದೇ ಪರಿಸರಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದತ್ತ ತೆರಳಿರುವ ಶಂಕೆ ಇದೆ.

ಎರಡು ವಾರದ ಹಿಂದೆ ಸುಳ್ಯ ತಾಲೂಕಿನ ಕೂಜಿಮಲೆಗೆ ಹಾಗೂ 10 ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಐನೆಕಿದು ಪ್ರದೇಶಕ್ಕೆ ನಕ್ಸಲರು ಭೇಟಿ ನೀಡಿದ್ದರು. ಆ ತಂಡದಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಒಟ್ಟು ನಾಲ್ಕು ಮಂದಿ ಇದ್ದರು ಎಂಬುದು ಸ್ಪಷ್ಟವಾಗಿತ್ತು.

- Advertisement -

Related news

error: Content is protected !!