- Advertisement -
- Advertisement -


ದ.ಕ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿವ ಬ್ರಿಜೇಶ್ ಚೌಟರವರು ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
18ನೇ ಸಂಸತ್ನಲ್ಲಿ ಮೊದಲ ಲೋಕಸಭೆ ಅಧಿವೇಶನ ಆರಂಭವಾಯಿತು. ಪದ್ದತಿಯಂತೆ ಎಲ್ಲಾ ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು. ಈ ವೇಳೆ ದಕ್ಷಿಣ ಕನ್ನಡ ಲೋಕಸಭೆ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಬ್ರಿಜೇಶ್ ಚೌಟರವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಈಗ ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ದಾಪೂರ್ವಕವಾಗಿ ನಿರ್ವಹಿಸುತ್ತೇನೆಂದು ತುಳುನಾಡಿನ ಎಲ್ಲ ದೈವ ದೇವರುಗಳ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಎಂದರು . ಪ್ರಮಾಣ ವಚನದ ಕೊನೆಯಲ್ಲಿ “ಮಾತೆರೆಗ್ಲಾ ಸೋಲ್ಮೆಲು” (ಎಲ್ಲರಿಗೂ ಧನ್ಯವಾದಗಳು) ಎಂದು ತುಳುವಿನಲ್ಲಿ ಹೇಳುವ ಮೂಲಕ ತುಳು ಭಾಷೆಯ ಬಗೆಗಿನ ತನ್ನ ಪ್ರೇಮವನ್ನು ಪ್ರಕಟಪಡಿಸಿದರು.
- Advertisement -