Saturday, June 22, 2024
spot_imgspot_img
spot_imgspot_img

*ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜೀ ಟಂಡನ್ ನಿಧನ*

- Advertisement -G L Acharya panikkar
- Advertisement -

ವರದಿ: ನ್ಯೂಸ್ ಡೆಸ್ಕ್, ವಿ ಟಿವಿ

ಭೋಪಾಲ್: ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜೀ ಟಂಡನ್ ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ಈ ಬಗ್ಗೆ ಅವರ ಪುತ್ರ,ಉತ್ತರ ಪ್ರದೇಶದ ಸಚಿವ ಅಶುತೋಷ್ ಟಂಡನ್ ಟ್ವೀಟ್ ಮಾಡಿದ್ದಾರೆ.

85 ವರ್ಷದ ವಯಸ್ಸಾಗಿದ್ದ ಟಂಡನ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಅವರನ್ನು ಜೂನ್ 14ರಂದು ಲಕ್ನೋದ ವೇದಾಂತ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.

ಬಿಜೆಪಿ ಹಿರಿಯ ನಾಯಕ ಲಾಲ್ ಜೀ ಟಂಡನ್ ಅವರು, 2009ರಲ್ಲಿ ಲಕ್ನೋದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. 1991ರಿಂದ 2003ರವೆರೆ ಹಲವು ಬಾರಿ ಉತ್ತರ ಪ್ರದೇಶದ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ನಂತರ 2018ರ ಆಗಸ್ಟ್ ನಿಂದ 2019ರ ಜುಲೈವರೆಗೆ ಬಿಹಾರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.

ಆರೋಗ್ಯ ಸಮಸ್ಯೆಯಿಂದ ಲಾಲ್ ಜೀ ಟಂಡನ್ ಅವರು ಆಸ್ಪತ್ರೆಗೆ ದಾಖಲಾದ ಬಳಿಕ ಉತ್ತರಪ್ರದೇಶದ ರಾಜ್ಯಪಾಲರಾದ ಆನಂದಿಬೆಲ್ ಪಟೇಲ್ ಅವರು ಹೆಚ್ಚುವರಿ ಅಧಿಕಾರ ವಹಿಸಿಕೊಂಡಿದ್ದರು. ಇನ್ನು ಲಾಲ್ ಜೀ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ರಾಜಕೀಯ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!