Sunday, October 18, 2026
spot_imgspot_img
spot_imgspot_img

MRPL ಸ್ಫೋಟ ಪ್ರಕರಣ:ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ಚಿಕಿತ್ಸೆ ಫಲಿಸದೆ ಸಾವು

- Advertisement -
- Advertisement -

ಸುರತ್ಕಲ್: ಇಲ್ಲಿನ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸೆ.30ರಂದು ನಡೆದಿದ್ದ ಸ್ಪೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜೇಶ್ ಡಿಸಿಲ್ವ ಅವರು ಶನಿವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ರಾಜೇಶ್ ಡಿಸಿಲ್ವ ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು ಹಲವು ವರ್ಷಗಳಿಂದ ಎಂ.ಆರ್.ಪಿ.ಎಲ್.ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಇಂದು ಸಂಜೆಯ ವೇಳೆ ಮೃತದೇಹವನ್ನು ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಬ್ಯಾಪಿಸ್ಟ್‌ ಡಿಸಿಲ್ವ ಅವರ ಐವರು ಮಕ್ಕಳ ಪೈಕಿ ರಾಜೇಶ್ ಡಿಸಿಲ್ವ ಸೇರಿ ಇಬ್ಬರು ಗಂಡು ಮಕ್ಕಳು ಹಾಗೂ ಮೂವರು ಹೆಣ್ಣುಮಕ್ಕಳಿದ್ದಾರೆ. ರಾಜೇಶ್ ಅವಿವಾಹಿತರಾಗಿದ್ದಾರೆ ಎಂದು ತಿಳಿದು ಬಂದಿದೆ.

ಎಂ ಆರ್ ಪಿ ಎಲ್ ನ ಫೇಸ್ 3ರ CHTU ನ ಪ್ಲಾಂಟ್ ನಲ್ಲಿ ಸೆ.30ರಂದು ಭಾರೀ ಸ್ಫೋಟ ಸಂಭವಿಸಿ, ಹಳೆಯಂಗಡಿ ನಿವಾಸಿ ಮನೀಶ್ ಸ್ಥಳದಲ್ಲೇ ಮೃತಪಟ್ಟಿದ್ದು, ರಾಜೇಶ್ ಡಿಸಿಲ್ವ ಗಂಭೀರ ಸುಟ್ಟಗಾಯಗಳಾಗಿ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!