- Advertisement -
- Advertisement -



ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.
ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ 2ನೇ ಬಾರಿಗೆ ಮುಂದೂಡಿಕೆಯಾಗಿದೆ. ಗಣೇಶ ಹಬ್ಬದ ಬಳಿಕ ಸೆಪ್ಟೆಂಬರ್ 9 ರಂದು ಮಧ್ಯಾಹ್ನ 2:30ಕ್ಕೆ ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಕಳೆದ ವಿಚಾರಣೆಯಲ್ಲಿ ರಾಜ್ಯಪಾಲರ ಪರವಾಗಿ ವಕೀಲ ತುಷಾರ ಮೆಹ್ತಾ , ಸ್ನೇಹಮಯಿಕೃಷ್ಣ ಪರ ಹಿರಿಯ ವಕೀಲ ಮಣೀಂಧರ್ ಸಿಂಗ್ ಹಾಗೂ ಪ್ರದೀಪ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ ವಾದ ಮಂಡಿಸಿದ್ದರು. ಸುದೀರ್ಘ ವಾದ ಆಲಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೋಮವಾರ (ಸೆ.2) ಮಧ್ಯಾಹ್ನಕ್ಕೆ ಮುಂದೂಡಿತ್ತು.
ಇಂದು ಸೋಮವಾರ (ಸೆ.2) ಮತ್ತೆ ಪ್ರತಿವಾದಿಗಳ ಪರ ಕೆಲ ವಕೀಲರಿಂದ ವಾದ ಮಂಡನೆ ಮಾಡಲಾಯಿತು. ಬಳಿಕ ಕೋರ್ಟ್ ವಿಚಾರಣೆಯನ್ನ ಮುಂದೂಡಿದೆ.
- Advertisement -