Sunday, October 6, 2024
spot_imgspot_img
spot_imgspot_img

ಮುಡಾ ಪ್ರಕರಣ: ಸಿಎಂ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ

- Advertisement -
- Advertisement -

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾದಲ್ಲಿ ಹಗರಣ ನಡೆದಿದೆ ಎನ್ನಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಸೋಮವಾರ (ಇಂದು) ಪ್ರಕರಣ ದಾಖಲಿಸಿದೆ.

ದೂರುದಾರ ಸ್ನೇಹಮಯಿ ಕೃಷ್ಣ ಇಡಿ ಕಚೇರಿಗೆ ದೂರು ದಾಖಲಿಸಿದ್ದು, ದೂರು ದಾಖಲಿಸಿರುವುದಕ್ಕೆ ಇಡಿ ಅಧಿಕಾರಿಗಳು ಸ್ವೀಕೃತಿ ಪತ್ರ ಸಹ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೈಸೂರಿನ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್‌ನಲ್ಲಿ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ(ಮುಡಾ) ಸಿದ್ದರಾಮಯ್ಯ ಅವರ ಪತ್ನಿಗೆ ನೀಡದ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಿಎಂ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.

PMLA ಕಾಯ್ದೆಯಡಿ ECIR ದಾಖಲಾಗಿದ್ದು, ಈ ECIR ಪೊಲೀಸರ FIRಗೆ ಸರಿ ಸಮಾನವಾಗಿದೆ.  ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ವಿಶೇಷಾಧಿಕಾರವಿದೆ. ಸಮನ್ಸ್ ನೀಡಿ ವಿಚಾರಣೆಗೆ ಕರೆಯಬಲ್ಲ ಅಧಿಕಾರ ಇಡಿಗಿದೆ. ಅಲ್ಲದೇ ತನಿಖೆ ಹಂತದಲ್ಲಿ ಆಸ್ತಿಗಳನ್ನ ಸೀಜ್ ಮಾಡುವ ಅಧಿಕಾರವಿದೆ.

- Advertisement -

Related news

error: Content is protected !!