Tuesday, December 3, 2024
spot_imgspot_img
spot_imgspot_img

ಮುಡಾ ಹಗರಣ: ಮತ್ತೊಂದು ಸಾಕ್ಷಿ ತೆರೆದಿಟ್ಟ ಸ್ನೇಹಮಯಿ ಕೃಷ್ಣ

- Advertisement -
- Advertisement -

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಸಾಕ್ಷಿಯನ್ನು ಬಯಲು ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ವಿಚಾರದಲ್ಲಿ ತಹಶೀಲ್ದಾರ್ ಹಣ ಪಾವತಿಸಿದ್ದಾರೆ. ಮುದ್ರಾಂಕ ಶುಲ್ಕವನ್ನು ತಹಶೀಲ್ದಾರ್ ಅವರೇ ಪಾವತಿ ಮಾಡಿದ್ದಾರೆ ಎಂದು ಮತ್ತೊಂದು ಕ್ರಯಪತ್ರದ ಮೂಲಕ ಸ್ನೇಹಮಯಿ ಕೃಷ್ಣ ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ದೂರುದಾರ ಸ್ನೇಹಮಯಿ ಕೃಷ್ಣ ಸಿಎಂ ಪತ್ನಿ ಪಾರ್ವತಿ ಅವರ ಕ್ರಯಪತ್ರದಲ್ಲಿ ಮುದ್ರಾಂಕ ಶುಲ್ಕ ಪಾವತಿಯನ್ನು ತಹಶೀಲ್ದಾರ್ ಮಾಡಿದ್ದಾರೆ. ನನ್ನ ಆರೋಪಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದ್ದಾರೆ.

ಕ್ರಯಪತ್ರ ನೋಂದಣಿ ಮಾಡಿಸಿಕೊಳ್ಳುವವರು ನೋಂದಣಿಗೆ ಸಂಬಂಧಿಸಿದ ಶುಲ್ಕಗಳನ್ನು ಪಾವತಿ ಮಾಡಬೇಕು, ಅದೇ ರೀತಿ ಎನ್.ಮಂಜುನಾಥ್ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಕ್ರಯಪತ್ರ ಗಮನಿಸಿ, ಮುಡಾದ ವಿಶೇಷ ತಹಶೀಲ್ದಾರ್ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ ಎಂಬುದು ಖಚಿತವಾಗಿ ತಿಳಿದುಬರುತ್ತದೆ.

ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು? ಮುಡಾ ಹಗರಣದ ಬಗ್ಗೆ ಸ್ನೇಹಮಯಿ ಕೃಷ್ಣ ಮಾಡಿರುವ ಆರೋಪದ ಬಗ್ಗೆ ಮಾತನಾಡಿದ ಅವರು, ಆ ಸಮಯದಲ್ಲಿ ನನ್ನ ತಾಯಿಗೆ ಹುಷಾರಿರಲಿಲ್ಲ, ರಿಜಿಸ್ಟ್ರೇಷನ್ ಫೀ ತುಂಬಿದ್ರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಿದ್ದರಾಮಯ್ಯ ಅವರಿಗೆ ಈಗಾಗಲೇ ನೋಟಿಸ್ ಜಾರಿ ಮಾಡಿದೆ. ನನಗೆ ನ್ಯಾಯ ಸಿಗದಿದ್ದರೆ ನಾನು ಕೋರ್ಟ್ಗೆ ಹೋಗುತ್ತೇನೆ ಎಂದು ಸ್ನೇಹಮಯಿ ಎಚ್ಚರಿಸಿದ್ದರು.

- Advertisement -

Related news

error: Content is protected !!