Saturday, June 28, 2025
spot_imgspot_img
spot_imgspot_img

ಮುಡಾ ಹಗರಣ ಪ್ರಕರಣ; ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು

- Advertisement -
- Advertisement -

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ ಪಿ ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಸಿಆರ್‌ಪಿಸಿ ಅಡಿಯಲ್ಲಿ ಎಫ್​ಐಆರ್​ ದಾಖಲಿಸಿ ಎಂದು ಕೋರ್ಟ್​ ಆದೇಶ ಕೂಡಾ ನೀಡಿತ್ತು. ಅದೇ ಕಾಯ್ದೆಯಡಿ ಇದೀಗ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ.

ನ್ಯಾಯಾಲಯ ಸೂಚಿಸಿರುವ ಐಪಿಸಿ ಸೆಕ್ಷನ್ ಭ್ರಷ್ಟಾಚಾರ ತಡೆ ಕಾಯ್ದೆ, ಬೇನಾಮಿ ಆಸ್ತಿ ವಹಿವಾಟು ಕಾಯ್ದೆ, ಭೂ ಕಬಳಿಕೆ ನಿರ್ಬಂಧ ಕಾಯ್ದೆಯಡಿ ಲೋಕಾಯುಕ್ತ ಎಫ್​ಐಆರ್ ದಾಖಲಿಸಿದೆ. ಸಿಎಂ ಸಿದ್ದರಾಮಯ್ಯ A 1 ಆರೋಪಿಯಾಗಿದ್ದರೆ, ಪತ್ನಿ ಪಾರ್ವತಿ A 2 ಆರೋಪಿಯಾಗಿದ್ದಾರೆ. ಇನ್ನು ಮಲ್ಲಿಕಾರ್ಜುನ A 3, ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್​ಐಆರ್​ನಲ್ಲಿ ದಾಖಲು ಮಾಡಲಾಗಿದೆ.

- Advertisement -

Related news

error: Content is protected !!