Saturday, June 20, 2026
spot_imgspot_img
spot_imgspot_img

ಮುಡಾ ಹಗರಣ ಪ್ರಕರಣ : ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್‌; ಸಿಎಂಗೆ 2 ದಿನ ರಿಲೀಫ್‌!

- Advertisement -
- Advertisement -

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಆದೇಶದ ಕುರಿತ ರಿಟ್‌ ಅರ್ಜಿ ವಿಚಾರಣೆಯನ್ನು ಮತ್ತೆ ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ.

ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘವಾಗಿ ವಾದ ಮಂಡಿಸಿದರು. ಇನ್ನು ರಾಜ್ಯಪಾಲರ ಪರ ವಕೀಲ ತುಷಾರ್ ಮೆಹ್ತಾ ಅವರು ಶನಿವಾರ ವಾದ ಮಂಡಿಸುವುದಾಗಿ ಕೋರ್ಟ್​ಗೆ ತಿಳಿಸಿದರು. ಇದಕ್ಕೆ ಕೋರ್ಟ್​ ಸಹ ಒಪ್ಪಿಗೆ ನೀಡಿದೆ. ಇದರೊಂದಿಗೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕೋರ್ಟ್, ಆಗಸ್ಟ್ 31 ಬೆಳಗ್ಗೆ 10:30ಕ್ಕೆ ಮುಂದೂಡಿತು.

- Advertisement -

Related news

error: Content is protected !!