Sunday, June 7, 2026
spot_imgspot_img
spot_imgspot_img

ಮೂಡುಬಿದಿರೆ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!!

- Advertisement -
- Advertisement -
vtv vitla

ಮೂಡುಬಿದಿರೆ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುರಸಭೆ ವ್ಯಾಪ್ತಿಯ ಅಲಂಗಾರಿನಲ್ಲಿ ನಡೆದಿದೆ.

ಮೂಡುಬಿದಿರೆ ಎಸ್‌.ಎನ್‌.ಎಂ ಪಾಲಿಟೆಕ್ನಿಕ್‌ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಸಾತ್ವಿಕ್(21) ಆತ್ಮಹತ್ಯೆ ಮಾಡಿಕೊಂಡವರು.

ಭಾನುವಾರ ಬೆಳಗ್ಗೆ ಸಾತ್ವಿಕ್‌ನನ್ನು ಆತನ ತಾಯಿ ಎಬ್ಬಿಸುವಾಗ ಕೋಪಗೊಂಡಿದ್ದು, ಕೆಲವು ನಿಮಿಷಗಳ ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಗನನ್ನು ಎಬ್ಬಿಸಿ, ಪರೀಕ್ಷೆ ಹತ್ತಿರ ಬಂದಿದೆ, ಬೇಗ ಎದ್ದು ಓದು ಎಂದು ಬುದ್ಧಿವಾದ ಹೇಳಿದರೆನ್ನಲಾಗಿದೆ.ಇಷ್ಟಕ್ಕೆ ಕೋಪಗೊಂಡ ಸಾತ್ವಿಕ್ ಕೋಣೆಯ ಬಾಗಿಲು ಮುಚ್ಚಿ ಶಾಲನ್ನು ಫ್ಯಾನಿಗೆ ಕಟ್ಟಿ ಆತ್ಮಹತ್ಯೆಗೈದಿದ್ದಾನೆ ಎನ್ನಲಾಗಿದೆ.

ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .ಕ್ಷುಲ್ಲಕ ಕಾರಣಕ್ಕೆ ಪ್ರತಿಭಾವಂತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡರೇ ಅಥವಾ ಬೇರೆ ಏನಾದರೂ ಕಾರಣ ಇದೆಯಾ ಎನ್ನುವುದು ಪೊಲೀಸ್ ತನಿಖೆಯಲ್ಲಿ ತಿಳಿದು ಬರಬೇಕಿದೆ.

- Advertisement -

Related news

error: Content is protected !!