Saturday, April 27, 2024
spot_imgspot_img
spot_imgspot_img

ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾದ ವಿಟ್ಲದ ದಕ್ಷ ಪೊಲೀಸ್‌ ಇನ್ಸ್‌ಪೆಕ್ಟರ್ ಹೆಚ್.ಇ ನಾಗರಾಜ್‌

- Advertisement -G L Acharya panikkar
- Advertisement -
vtv vitla

ಬೆಂಗಳೂರು: ರಾಜ್ಯದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ 2022ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವರು ಈ ಪದಕಕ್ಕೆ ಭಾಜನರಾಗಿದ್ದಾರೆ.

ವಿಟ್ಲ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಹೆಚ್.ಇ. ನಾಗರಾಜ್ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಮಂದಿ ಹಾಗೂ ರಾಜ್ಯದ ಹಲವು ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು 2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ..

ವಿಟ್ಲ ಪೊಲೀಸ್ ಠಾಣೆ ಮೇಲ್ದರ್ಜೆಗೆ ಏರಿದ್ದು ಹೆಚ್‌ಇ ನಾಗರಾಜ್ ಅವರು ವಿಟ್ಲ ಪೊಲೀಸ್ ಠಾಣೆಯ ಪ್ರಥಮ ಪೊಲೀಸ್ ಇನ್ಸ್‌ಪೆಕ್ಟರ್‌. ದಕ್ಷ ಪೊಲೀಸ್ ಅಧಿಕಾರಿಯಾಗಿರುವ ಇವರು ವಿಟ್ಲದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪಣ ತೊಟ್ಟಿದ್ದಾರೆ. ಗಲಭೆ, ಗಾಂಜಾ ಸಾಗಾಟ, ಕಳ್ಳತನ ಹೀಗೆ ಇನ್ನಿತರ ಸಮಾಜ ಘಾತುಕ ಚಟುವಟಿಕೆಗಳನ್ನು ತಡೆಗಟ್ಟಲು ಅವಿರತ ಪ್ರಯತ್ನ ನಡೆಸಿದ್ದಾರೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯು ಕೇರಳ ಗಡಿ ಭಾಗವಾಗಿದ್ದು, ಹಲವು ಅಕ್ರಮಕ್ಕೆ ಬ್ರೇಕ್ ಹಾಕಿದ್ದಾರೆ.

- Advertisement -

Related news

error: Content is protected !!