Saturday, June 28, 2025
spot_imgspot_img
spot_imgspot_img

ಮೂಲ್ಕಿ: ಮಾದಕ ವಸ್ತು ಸಾಗಾಟಕ್ಕೆ ಯತ್ನ; ಆರೋಪಿಯ ಬಂಧನ..!

- Advertisement -
- Advertisement -

ಮೂಲ್ಕಿ: ಎಂಡಿಎಂಎ, ಹೈಡೋ ವೀಡ್ ಗಾಂಜಾ ಮತ್ತಿತರ ವಿವಿಧ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ಮೂಲ್ಕಿ ಬಳಿ ನಡೆದಿದೆ.

ಬಂಧಿತ ಆರೋಪಿಯನ್ನು ಉಡುಪಿ ಜಿಲ್ಲೆಯ ಮಲ್ಪೆ ನಿವಾಸಿ ಮೊಹಮ್ಮದ್ ಸಲೀಂ (38) ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಮುಲ್ಕಿ ಪೊಲೀಸರು ಬಪ್ಪನಾಡು ಚೆಕ್ ಪೋಸ್ಟ್ ಬಳಿ ತಡೆದು ನಿಲ್ಲಿಸಿ ಬಂಧಿಸಿ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಾದಕ ವಸ್ತುಗಳನ್ನು ಕಾರಿನ ಡ್ಯಾಶ್ ಬಾಕ್ಸ್ ನಲ್ಲಿ ಇರಿಸಿ ಸಾಗಿಸಲಾಗುತ್ತಿತ್ತು. ಅವುಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಸಾಗಿಸುತ್ತಿದ್ದ ಎನ್ನಲಾಗಿದೆ.

ಮೂಲ್ಕಿ ಪೊಲೀಸ್ ಇನ್ಸೆಕ್ಟರ್ ಅನಿತಾ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಪೊಲೀಸರು ಕಾರನ್ನು ತಡೆದು ತಪಾಸಣೆಗೆ ಯತ್ನಿಸಿದಾಗ ಆರೋಪಿ ಚಾಲಕ ಕಾರು ನಿಲ್ಲಿಸದೆ ಓಡಿ ಹೋಗಲು ಯತ್ನಿಸಿದ್ದಾನೆ. ಕೂಡಲೇ ಅಲರ್ಟ್ ಆದ ಪೊಲೀಸರು ಆರೋಪಿಯನ್ನು ಕಾರು ಸಮೇತ ಬಂಧಿಸಿ. ಕಾರಿನಲ್ಲಿದ್ದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -

Related news

error: Content is protected !!