- Advertisement -
- Advertisement -


ಮುಲ್ಕಿ: ಬೈಕ್‌ಗೆ ತಡೆರಹಿತ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣ ಜಂಕ್ಷನ್ ಬಳಿ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಮುಲ್ಕಿ ಅಂಚೆ ಕಚೇರಿಯ ಅಂಚೆಪಾಲಕ ಕೊಲ್ಲೂರು ನಿವಾಸಿ ಪಾಂಡುರಂಗ ರಾವ್ ಎಂದು ಗುರುತಿಸಲಾಗಿದೆ.
ಗಾಯಾಳು ಪಾಂಡುರಂಗ ರಾವ್ ತಮ್ಮ ಬೈಕ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಮುಲ್ಕಿ ಜಂಕ್ಷನ್ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದಾಗ ಉಡುಪಿ ಕಡೆಯಿಂದ ಸರ್ವಿಸ್ ರಸ್ತೆಯಲ್ಲಿ ಬಂದ ತಡೆರಹಿತ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಸಂದರ್ಭ ಪಾಂಡುರಂಗ ರಾವ್ ರವರ ತಲೆಗೆ, ಕಾಲಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ದೃಶ್ಯ ಸ್ಥಳೀಯ ಅಂಗಡಿ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
- Advertisement -








