Saturday, May 18, 2024
spot_imgspot_img
spot_imgspot_img

ಮುಲ್ಕಿ: ನದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ..!!

- Advertisement -G L Acharya panikkar
- Advertisement -

ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯ ದಡದಲ್ಲಿ ಸುಮಾರು 19 ರಿಂದ 20 ವರ್ಷದ ಒಳಗಿನ ಪ್ರಾಯದ ಯುವಕನ ಶವ ಪತ್ತೆಯಾಗಿದೆ. ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮುಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಕಳೆದ ಕೆಲ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಶವ ಆತನದ್ದೇ ಇರಬೇಕು ಇರಬೇಕೆಂಬ ಶಂಕೆ ವ್ಯಕ್ತವಾಗಿದೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

- Advertisement -

Related news

error: Content is protected !!