Monday, July 27, 2026
spot_imgspot_img
spot_imgspot_img

ಮುಲ್ಕಿ: ಕೋಟ್ಯಾಂತರ ರೂ. ವಂಚನೆ ಪ್ರಕರಣ; ದಂಪತಿಯ ಬಂಧನ

- Advertisement -
- Advertisement -

ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಕಿನ್ನಿಗೋಳಿ ಪರಿಸರದಲ್ಲಿನ ಸಾರ್ವಜನಿಕರಿಗೆ ಮಾರುಕಟ್ಟೆಯಲ್ಲಿ ಹಣವನ್ನು ಹೊಡಿಕೆ ಮಾಡಿ ಲಾಭಾಂಶ ನೀಡುವುದಾಗಿ ಸುಮಾರು 1.5 ಕೋಟಿ ಹಣ ಹಾಗೂ ಚಿನ್ನವನ್ನು ಪರಿಚಯಸ್ಥರಿಂದ ಪಡೆದು ಹಲವರಿಗೆ ವಂಚಿಸಿದ್ದ ಆರೋಪಿ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ

ಬಂಧಿತ ಆರೋಪಿಯನ್ನು ಕವತ್ತಾರಿನ ರಿಚ್ಚರ್ಡ್ ಡಿ ಸೋಜಾ ಮತ್ತು ಅವರ ಪತ್ನಿ ರಶ್ಮಿ ರೀಟಾ ಪಿಂಟೋ ಎಂದು ಗುರುತಿಸಲಾಗಿದೆ.

ಇವರು ಹಣ ಪಡೆದು ವಂಚನೆ ಎಸಗುತ್ತಿದ್ದ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧನಕ್ಕೆ ಸಿಗದೆ ದಂಪತಿ ಸುಮಾರು ಒಂದೂವರೆ ವರ್ಷಗಳಿಂದ ಮುಂಬೈನಲ್ಲಿ ತಲೆಮರೆಸಿಕೊಂಡಿದ್ದರು. ಇದೀಗ ಅಲ್ಲಿ ಗಂಡ-ಹೆಂಡತಿಯನ್ನು ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!