Tuesday, July 1, 2025
spot_imgspot_img
spot_imgspot_img

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಹುಭಾಷಾ ನಟ ಪ್ರಭುದೇವ್ ಭೇಟಿ

- Advertisement -
- Advertisement -

ಸುಬ್ರಹ್ಮಣ್ಯ: ಬಹುಭಾಷಾ ನಟ ಹಾಗೂ ಇಂಡಿಯನ್​ ಮೈಕೆಲ್​ ಜಾಕ್ಸನ್​ ಎಂದೇ ಪ್ರಸಿದ್ಧಿ ಪಡೆದಿರುವ ಡ್ಯಾನ್ಸ್​ ಮಾಸ್ಟರ್​ ಪ್ರಭುದೇವ್​ ಅವರು ಕುಟುಂಬ ಸಮೇತರಾಗಿ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಪ್ರಭುದೇವ್ ಅವರ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ್‌ ದಂಪತಿಯನ್ನು ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್, ಮುಂತಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!