Friday, August 21, 2026
spot_imgspot_img
spot_imgspot_img

ಮುಂಬೈ: ಪ್ಯಾಕ್‌ ಮಾಡದ ಖಾದ್ಯ ತೈಲ ಮಾರಾಟಕ್ಕೆ ನಿಷೇಧ – ನಿಯಮ ಉಲ್ಲಂಘಿಸಿದ್ರೆ 7 ವರ್ಷ ಜೈಲು

- Advertisement -
- Advertisement -

ಮುಂಬೈ: ಪ್ಯಾಕ್ ಮಾಡದ ಲೂಸ್ ಅಡುಗೆ ಎಣ್ಣೆಯ ಹೆಸರಿನಲ್ಲಿ ನಡೆಯುತ್ತಿದ್ದ ಮೋಸಕ್ಕೆ ಕಡಿವಾಣ ಹಾಕಲು ಮಹಾರಾಷ್ಟ್ರ ರಾಜ್ಯಾದ್ಯಂತ ಲೂಸ್ ಅಡುಗೆ ಎಣ್ಣೆ ಮಾರಾಟ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಆಯುಕ್ತರಾದ ತುಕಾರಾಮ್ ಮುಂಡೆ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, “ಬಡ ಮತ್ತು ಸಾಮಾನ್ಯ ಗ್ರಾಹಕರು ಕಡಿಮೆ ಪ್ರಮಾಣದಲ್ಲಿ ಲೂಸ್ ಎಣ್ಣೆಯನ್ನು ಖರೀದಿಸುವುದರಿಂದ ಅವರ ಆರೋಗ್ಯದ ಮೇಲೆ ಭಾರಿ ದುಷ್ಪರಿಣಾಮ ಬೀರುತ್ತಿದೆ. ಕಲಬೆರಕೆ ಎಣ್ಣೆ ಹಾಗೂ ಪದೇ ಪದೇ ಕಾಯಿಸಿದ ಎಣ್ಣೆಯನ್ನು ಬಳಸುವುದರಿಂದ ಕ್ಯಾನ್ಸರ್, ಲಿವರ್ ಸಮಸ್ಯೆ, ಪಾರ್ಶ್ವವಾಯು ಮತ್ತು ಹೃದಯ ಸಂಬಂಧಿ ಕಾಯಿಲೆಗಳು ಬರುವ ಅಪಾಯ ಹೆಚ್ಚಾಗಿರುತ್ತದೆ. ಹಾಗಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕಠಿಣ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

ಮಾರುಕಟ್ಟೆಯಲ್ಲಿ ಪ್ಯಾಕ್ ಮಾಡದ ಲೂಸ್ ಅಡುಗೆ ಎಣ್ಣೆಗಳಲ್ಲಿ ಅತಿ ಹೆಚ್ಚು ಕಲಬೆರಕೆ ನಡೆಯುತ್ತಿದೆ ಎಂಬ ದೂರುಗಳು ಬಂದಿದ್ದವು. ಕಡಿಮೆ ಬೆಲೆಯ ಮತ್ತು ಆರೋಗ್ಯಕ್ಕೆ ಹಾನಿಕಾರಕವಾದ ಅಡುಗೆ ಎಣ್ಣೆಯಗಳನ್ನು ಇಂತಹ ಲೂಸ್ ಎಣ್ಣೆಯಲ್ಲಿ ಮಿಶ್ರಣ ಮಾಡಿ ಗ್ರಾಹಕರಿಗೆ ಮೋಸ ಮಾಡಲಾಗುತ್ತಿತ್ತು. ಹೀಗಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಇಂತಹ ವಂಚನೆಗೆ ಕಡಿವಾಣ ಹಾಕಲು ಆಹಾರ ಮತ್ತು ಔಷಧ ಆಡಳಿತ ಈ ಮಹತ್ವದ ಆದೇಶ ಹೊರಡಿಸಿದೆ.

ಈ ಆದೇಶದ ಅನುಸಾರ ಅಡುಗೆ ಎಣ್ಣೆಯನ್ನು ಲೂಸ್ ಆಗಿ ಮಾರಾಟ ಮಾಡುವುದು ನಿಷೇಧಿಸಲಾಗಿದೆ. ಎಣ್ಣೆಯನ್ನು ಕಡ್ಡಾಯವಾಗಿ ಸಂಪೂರ್ಣ ಮೊಹರು ಮಾಡಿದ ಮತ್ತು ಲೇಬಲ್ ಇರುವ ಪ್ಯಾಕೆಟ್ ಅಥವಾ ಡಬ್ಬಾಗಳಲ್ಲೇ ಮಾರಾಟ ಮಾಡಬೇಕು. ಕಲಬೆರಕೆ ಹಾಗೂ ಅಸುರಕ್ಷಿತ ತೈಲ ಮಾರಾಟ ಮಾಡುವುದು ಸಾಬೀತಾದರೆ ಗರಿಷ್ಠ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜೊತೆಗೆ, ನಿಯಮ ಉಲ್ಲಂಘಿಸುವ ತಯಾರಕರು, ವಿತರಕರು ಅಥವಾ ಗಿರಣಿ ಮಾಲೀಕರಿಗೆ ಗರಿಷ್ಠ 10 ಲಕ್ಷ ರೂಪಾಯಿಗಳವರೆಗೆ ಭಾರಿ ದಂಡ ವಿಧಿಸುವ ಸಾಧ್ಯತೆಯಿದೆ.

- Advertisement -

Related news

error: Content is protected !!