Wednesday, June 17, 2026
spot_imgspot_img
spot_imgspot_img

ಭೂಗತ ಪಾತಕಿ ಛೋಟಾ ರಾಜನ್‌ಗೆ ಕೊರೊನಾ ಪಾಸಿಟಿವ್; ಆಸ್ಪತ್ರೆಗೆ ದಾಖಲು!

- Advertisement -
- Advertisement -

ಮುಂಬೈ: ಭೂಗತ ಪಾತಕಿ ಛೋಟಾ ರಾಜನ್(61)ಗೆ ಕೊರೊನಾ ಸೋಂಕು ತಗುಲಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

2015ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಗಡಿಪಾರು ಮಾಡಿದ ನಂತರ ಛೋಟಾ ರಾಜನ್‌ನನ್ನು ಬಂಧಿಸಿ ದೆಹಲಿಯ ತಿಹಾರ್ ಜೈಲಿನಲ್ಲಿರಿಸಲಾಗಿದೆ. ಈತ 70ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಮುಂಬೈನಲ್ಲಿ ಆತನ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಿ ಅವುಗಳ ವಿಚಾರಣೆಗಾಗಿ ವಿಶೇಷ ಕೋರ್ಟ್ ಸ್ಥಾಪಿಸಲಾಗಿದೆ.

ಕರೊನಾ ಹಿನ್ನೆಲೆ ಭೂಗತ ಪಾತಕಿ ಛೋಟಾ ರಾಜನ್ ಆಸ್ಪತ್ರೆಯಲ್ಲಿರುವ ಕಾರಣ ಪ್ರಕರಣಗಳ ವಿಚಾರಣೆಗಾಗಿ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲು ಸಾಧ್ಯವಿಲ್ಲ ಎಂದು ತಿಹಾರ್ ಜೈಲಿನ ಸಹಾಯಕ ಜೈಲರ್ ಇಲ್ಲಿನ ಸೆಷನ್ಸ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!