Saturday, June 27, 2026
spot_imgspot_img
spot_imgspot_img

ಮದುವೆಯಾಗುತ್ತೇನೆಂದು ನಂಬಿಸಿ ಮಹಿಳಾ ಇನ್ಸ್ ಪೆಕ್ಟರ್ ಮೇಲೆ ಅತ್ಯಾಚಾರ..!

- Advertisement -
- Advertisement -

ಮುಂಬೈ: ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳ ವಿರುದ್ಧ ಮುಂಬೈನ ಮೇಘವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯು ಮಹಿಳಾ ಸಹಾಯಕ ಇನ್ಸ್ ಪೆಕ್ಟರ್ ಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದು, ಈ ಆರೋಪದ ಮೇಲೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಮುಖ ಆರೋಪಿ ಔರಂಗಾಬಾದ್ ಮೂಲದವನಾಗಿದ್ದು, ಸಾಮಾಜಿಕ ಜಾಲತಾಣದ ಮೂಲಕ ಮಹಿಳಾ ಸಹಾಯಕ ಪೊಲೀಸ್ ಇನ್ಸ್ ಪೆಕ್ಟರ್ ಗೆ ಪರಿಚಯವಾಗಿದ್ದನು.

ಮುಂಬೈನ ಪೊವಾಯ್ ಪ್ರದೇಶಕ್ಕೆ ಭೇಟಿಯಾಗಲು ಬಂದಿದ್ದ ಆರೋಪಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದು, ತನ್ನ ನೀಚಕೃತ್ಯದ ದೃಶ್ಯಗಳನ್ನು ಸೆರೆಹಿಡಿದು ಇಬ್ಬರು ಸ್ನೇಹಿತರೊಂದಿಗೆ ಸೇರಿಕೊಂಡು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಬ್ಲಾಕ್ ಮೇಲ್ ಮಾಡಿದ್ದಾರೆ. ಮಹಿಳಾ ಪೊಲೀಸ್ ಇನ್ಸ್ ಪೆಕ್ಟರ್ ಜೂನ್ 11 ರಂದು ಮೇಘವಾಡಿ ಠಾಣೆಗೆ ದೂರು ನೀಡಿದ್ದಾರೆ.

- Advertisement -

Related news

error: Content is protected !!