Monday, July 20, 2026
spot_imgspot_img
spot_imgspot_img

ಮುಂಬೈ: ಖ್ಯಾತ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ

- Advertisement -
- Advertisement -

ಮುಂಬೈ: ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿ ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ, ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ (83) ಬುಧವಾರ ರಾತ್ರಿ ಪುಣೆಯಲ್ಲಿ ನಿಧನರಾದರು. ಮಾಧವ ಗಾಡ್ಗೀಳ್ ಅವರು ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿಯ ಮಾಜಿ ಸದಸ್ಯರಾಗಿದ್ದರು ಮತ್ತು 2010 ರ ಪಶ್ಚಿಮ ಘಟ್ಟಗಳ ಪರಿಸರ ವಿಜ್ಞಾನ ತಜ್ಞರ ಸಮಿತಿ ಮುಖ್ಯಸ್ಥರಾಗಿದ್ದರು.

ಇವರು ಅಧ್ಯಯನ ನಡೆಸಿ ತಯಾರಿಸಿದ್ದ ವರದಿಯನ್ನು ಗಾಡ್ಗೀಳ್‌ ಆಯೋಗದ ವರದಿ ಎಂದೇ ಕರೆಯಲಾಗುತ್ತಿತ್ತು.1942 ರ ಮೇ 24 ರಂದು ಪುಣೆಯಲ್ಲಿ ಜನಿಸಿದ ಇವರು ಪುಣೆಯ ಫರ್ಗುಸನ್ ಕಾಲೇಜಿನಿಂದ ಬಿಎಸ್ಸಿ (ಪ್ರಾಣಿಶಾಸ್ತ್ರ) ಪದವಿ ಪಡೆದು 1965 ರಲ್ಲಿ ಅವರು ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಎಂಎಸ್ಸಿ ಪಡೆದು 1969 ರಲ್ಲಿ ಹಾರ್ವರ್ಡ್‌ನಿಂದ ಜೀವಶಾಸ್ತ್ರದಲ್ಲಿ ಪಿಎಚ್‌ಡಿ ಪದವಿ ಪಡೆದ್ದರು ರಾಷ್ಟ್ರೀಯ ಸಲಹಾ ಮಂಡಳಿಯ ಸದಸ್ಯರಾಗಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕ್ರೀಡಾ ಪಟುವಾಗಿದ್ದ ಮಾಧವ ಗಾಡ್ಗೀಳ್ 1959 ಮತ್ತು 1961 ರಲ್ಲಿ ಮಹಾರಾಷ್ಟ್ರ ರಾಜ್ಯ ಜ್ಯೂ ನಿಯರ್ ಮತ್ತು ಪುಣೆ ವಿಶ್ವವಿದ್ಯಾಲಯದ ಹೈಜಂಪ್‌ನಲ್ಲಿ ದಾಖಲೆ ನಿರ್ಮಿಸಿದ್ದರು.

- Advertisement -

Related news

error: Content is protected !!