Saturday, June 20, 2026
spot_imgspot_img
spot_imgspot_img

ಮುಂಬೈ: ತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ – ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮರಣ

- Advertisement -
- Advertisement -

ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿ ಎಂಟು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ತಹಸಿಲ್‌ನಲ್ಲಿ ನಡೆದಿದೆ. ಈ ಅಪಘಾತದಲ್ಲಿ ಏಳು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಢರಪುರ ಮೂಲದ 15 ಜನರು ಮಾಸ್ವಾಡ್‌ನ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಈ ವೇಳೆ ತಂಡುಲ್ವಾಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಪಿಕಪ್‌ನಲ್ಲಿ ಇದ್ದವರು ಹೆಚ್ಚಿನವರು ಸಂಬಂಧಿಕರು ಮತ್ತು ನೆರೆಹೊರೆಯವರು ಎಂದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, 15 ಜನರನ್ನು ಹೊತ್ತೊಯ್ಯುತ್ತಿದ್ದ ಪಿಕ್-ಅಪ್ ವಾಹನವು ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ, ರಸ್ತೆಬದಿಯ ಜಮೀನಿಗೆ ನುಗ್ಗಿ ಬಾವಿಗೆ ಬಿದ್ದಿದೆ. ಇದರಿಂದಾಗಿ 8 ಮಂದಿ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೋಲಾಪುರದ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಕುಲಕರ್ಣಿ ತಿಳಿಸಿದ್ದಾರೆ.

ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೊಷಿಸಿದ್ದಾರೆ.

ಸೋಲಾಪುರ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!