Saturday, June 13, 2026
spot_imgspot_img
spot_imgspot_img

ಆರ್.ಆರ್.ನಗರ ಉಪ ಚುನಾವಣೆಗೆ ಇಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ ಸಲ್ಲಿಕೆ!

- Advertisement -
- Advertisement -

ಬೆಂಗಳೂರು : ಆರ್.ಆರ್.ನಗರ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಇಂದು ಬೆಳಗ್ಗೆ ( ಬುಧವಾರ) ನಾಮಪತ್ರ ಸಲ್ಲಿಸಲಿದ್ದಾರೆ.

ಇಂದು ಬಿಜೆಪಿ ನಗರ ಕಾರ್ಯಾಲಯ ಬಾಬುರಾವ್ ದೇಶಪಾಂಡೆ ಭವನದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಆರ್. ಅಶೋಕ್, ಅರವಿಂದ ಲಿಂಬಾವಳಿ, ಅಭ್ಯರ್ಥಿ ಮುನಿರತ್ನ ಹಾಗೂ ಬಿಜೆಪಿ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.

ಬಳಿಕ ಬೆಳಗ್ಗೆ 10.30 ಕ್ಕೆ ಆರ್‌.ಆರ್. ನಗರ ಬಿಬಿಎಂಪಿ ಕಚೇರಿಯಲ್ಲಿ ಮುನಿರತ್ನ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ, ಸಚಿವ ಆರ್.ಅಶೋಕ್, ಅರವಿಂದ ಲಿಂಬಾವಳಿ ಭಾಗವಹಿಸಲಿದ್ದಾರೆ.
 

- Advertisement -

Related news

error: Content is protected !!