- Advertisement -
- Advertisement -



ಕೆನಡಾದ ನಯಾಗ್ರಾದಲ್ಲಿ ಗುಜರಾತ್ ಮೂಲದ ವಿದ್ಯಾರ್ಥಿನಿಯನ್ನು ದುಷ್ಕರ್ಮಿಯೊಬ್ಬ ಚಾಕು ಇರಿದು ಹತ್ಯೆ ಮಾಡಿದ್ದಾನೆ
ಕೊಲೆಯಾದ ಯುವತಿಯನ್ನು ವಿಧಿ ಮೇಘಾ (22) ಎಂದು ಗುರುತಿಸಲಾಗಿದೆ. ಗುಜರಾತ್‌ನ ಆಳಂದ ಜಿಲ್ಲೆಯ ಬೊರ್ಸಾದ್ ಮೂಲದ ವಿಧಿ ಮೇಘಾ ಕಳೆದ ನಾಲ್ಕು ವರ್ಷಗಳಿಂದ ಕೆನಡಾದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದಳು. ವಿದ್ಯಾಭ್ಯಾಸದೊಂದಿಗೆ ಪಾರ್ಟ್‌ಟೈಮ್ ಕೆಲಸ ಮಾಡುತ್ತಿದ್ದಳು.
ವಿಧಿ ಮೇಘಾ ಎಂದಿನಂತೆ ಕೆಲಸಕ್ಕೆ ಹೊರಟಿದ್ದ ಸಮಯದಲ್ಲಿ ದುಷ್ಕರ್ಮಿ ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ.
ಪ್ರಾಥಮಿಕ ತನಿಖೆ ಪ್ರಕಾರ, ದರೋಡೆ ಯತ್ನದ ವೇಳೆ ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿದೆ. ಆದರೆ ಹತ್ಯೆಯ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ.
- Advertisement -








