Thursday, April 18, 2024
spot_imgspot_img
spot_imgspot_img

ಜೋಡಿ ಕೊಲೆ ಪ್ರಕರಣ; ರವಿ ಪೂಜಾರಿ ಜಾಮೀನು ಅರ್ಜಿ ವಜಾ

- Advertisement -G L Acharya panikkar
- Advertisement -

ಬೆಂಗಳೂರು ಅ31: 2007ರಲ್ಲಿ ನಡೆದಿದ್ದ ನಗರದ ಶಬನಮ್ ಡೆವಲಪರ್ಸ್ ಉದ್ಯೋಗಿಗಳ ಜೋಡಿಕೊಲೆ ಪ್ರಕರಣದ ಆರೋಪಿ ರವಿ ಪೂಜಾರಿಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ.
ತಿಲಕ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಶಬನಮ್ ಡೆವಲಪರ್ಸ್ ಉದ್ಯೋಗಿಗಳಾದ ರವಿ ಹಾಗೂ ಶೈಲಜಾ ಎಂಬುವರ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ರವಿ ಪೂಜಾರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ವಜಾಗೊಳಿಸಿದೆ.


ಜಾಮೀನು ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಪ್ರಕರಣದ ವಿಚಾರಣೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.


ಕಳೆದ 26 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಹಳ ಕಷ್ಟಪಟ್ಟು ಬಂಧಿಸಿ ಭಾರತಕ್ಕೆ ಕರೆತರಲಾಗಿದೆ. ಆತನ ವಿರುದ್ಧ 108 ಅಪರಾಧ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಆಯಂಟನಿ ಫರ್ನಾಂಡಿಸ್ ಎಂದು ಹೆಸರು ಬದಲಿಸಿಕೊಂಡು ವಿದೇಶದಲ್ಲಿ ನೆಲೆಸಿದ್ದ. ಈಗ ಜಾಮೀನು ನೀಡಿದರೆ ಮತ್ತೆ ತಲೆಮರೆಸಿಕೊಳ್ಳುವ ಸಾಧ್ಯತೆ ಇದೆ ಎಂದು ನ್ಯಾಯಪೀಠಕ್ಕೆ ಸರ್ಕಾರಿ ಪರ ವಕೀಲರು ತಿಳಿಸಿದ್ದರು.

- Advertisement -

Related news

error: Content is protected !!