Thursday, July 23, 2026
spot_imgspot_img
spot_imgspot_img

ಮಂಗಳೂರು: ತೊಕ್ಕೊಟ್ಟಿನಲ್ಲಿ ವ್ಯಕ್ತಿಯೋರ್ವನ ಮಾರಕಾಸ್ತ್ರಗಳಿಂದ ಕೊಚ್ಚಿ ಹ*ತ್ಯೆ

- Advertisement -
- Advertisement -

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಫೈಓವರ್‌ ಮೇಲ್ಬಾಗದಲ್ಲಿ ಶುಕ್ರವಾರ ಬೆಳಿಗ್ಗೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.ಕೊಲೆಯಾದ ವ್ಯಕ್ತಿಯನ್ನು ಮುಳ್ಳುಗುಡ್ಡೆ ಹೌಸ್‌, ತಲಪಾಡಿ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯಿಂದ ರಸ್ತೆಗೆ ಬಿದ್ದ ತಕ್ಷಣವೇ, ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!