Sunday, April 28, 2024
spot_imgspot_img
spot_imgspot_img

ಹಿಂದೂ ಬಾಲಕಿ ಜೊತೆ ಮುಸ್ಲಿಂ ಯುವಕ ಪರಾರಿ; ಲವ್‌ ಜಿಹಾದ್‌ ಆರೋಪ

- Advertisement -G L Acharya panikkar
- Advertisement -

ಅಪ್ರಾಪ್ತ ಹಿಂದೂ ಬಾಲಕಿಯನ್ನು ಪ್ರೀತಿ ಹೆಸರಲ್ಲಿ ಪುಸಲಾಯಿಸಿ ಅನ್ಯಧರ್ಮೀಯ ಯುವಕ ಕರೆದೊಯ್ದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ.

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಮುಸ್ಲಿಂ ಯುವಕನೋರ್ವ ಪ್ರೀತಿ ಹೆಸರಲ್ಲಿ ಕರೆದೊಯ್ದಿದ್ದಾನೆ. ಪಟ್ಟಣದ 19 ವರ್ಷದ ಯುವಕ ಸೈಯದ್ ತಬ್ರೀಜ್ ವಿರುದ್ಧ ಲವ್ ಜಿಹಾದ್ ಆರೋಪಿಸಲಾಗಿದೆ. ಬಾಲಕಿ ಪೋಷಕರಿಂದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ದೂರು ನೀಡಲಾಗಿದೆ. ದೂರಿನ ಬಳಿಕ ಪಟ್ಟಣ ಪೊಲೀಸರು ಬಾಲಕಿ ಹಾಗೂ ಯುವಕನನ್ನು ಪತ್ತೆ ಹಚ್ಚಿ ಕರೆತಂದಿದ್ದಾರೆ.

ಪ್ರಕರಣದ ಬಳಿಕ ಹಿಂದೂ ಸಂಘಟನೆಗಳಿಂದ ಠಾಣೆ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಪಟ್ಟಣದಲ್ಲೂ ಅನ್ಯಧರ್ಮೀಯರಿಂದ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿದೆ.

ಬಾಲಕಿ ಕರೆದೊಯ್ದು ಯುವಕನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದ ಹಿಂದೆ ಅನ್ಯ ಕೋಮಿನವರು ಲವ್ ಜಿಹಾದ್‌ಗೆ ಪ್ರಚೋದನೆ ನೀಡುತ್ತಿರುವುದಾಗಿ ಆರೋಪಿಸಿ ತನಿಖೆಗೆ ಆಗ್ರಹಿಸಲಾಗಿದೆ.

- Advertisement -

Related news

error: Content is protected !!